Home » ಸಂದರ್ಶನ, ಪರೀಕ್ಷೆಗಾಗಿ ಬೆಂಗಳೂರಿಗೆ ಬರುವ ಯುವತಿಯರಿಗೆ 3 ದಿನ ಉಚಿತ ಊಟ ಮತ್ತು ವಸತಿ ಸೌಲಭ್ಯ

ಸಂದರ್ಶನ, ಪರೀಕ್ಷೆಗಾಗಿ ಬೆಂಗಳೂರಿಗೆ ಬರುವ ಯುವತಿಯರಿಗೆ 3 ದಿನ ಉಚಿತ ಊಟ ಮತ್ತು ವಸತಿ ಸೌಲಭ್ಯ

by manager manager

ಬೆಂಗಳೂರು ನಗರಕ್ಕೆ ಉದ್ಯೋಗದ ಸಂದರ್ಶನಕ್ಕಾಗಿ ಮತ್ತು ಪ್ರವೇಶ ಪರೀಕ್ಷೆಗಳಿಗಾಗಿ ಬರುವಂತಹ ಯುವತಿಯರಿಗೆ ಸುರಕ್ಷಿತ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಟ್ರಾನ್ಸಿಟ್ ಹಾಸ್ಟೆಲ್‌ಗಳನ್ನು ಪ್ರಾರಂಭಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳಲು ಪ್ರಕಟಣೆ ಹೊರಡಿಸಲಾಗಿದೆ.

ಉಲ್ಲೇಖಿತ ಅರೇ ಸರ್ಕಾರಿ ಪತ್ರದಡಿಯಲ್ಲಿ 2018-19 ನೇ ಸಾಲಿನ ಆಯವ್ಯಯ ಭಾಷಣದ ಘೋಟಣೆಯಂತೆ ಈ ಟ್ರಾನ್ಸಿಟ್ ಹಾಸ್ಟೆಲ್‌ಗಳನ್ನು ಆರಂಭಿಸಲಾಗಿದೆ.

ಪ್ರಕಟಣೆಯಲ್ಲಿ ತಿಳಿಸಿರುವಂತೆ ಬೆಂಗಳೂರಿಗೆ ಉದ್ಯೋಗದ ಸಂದರ್ಶನಕ್ಕಾಗಿ ಮತ್ತು ಪ್ರವೇಶ ಪರೀಕ್ಷೆಗಳಿಗಾಗಿ, ಇತ್ಯಾದಿಗಳಿಗೆ ಹಾಜರಾಗಲು ಒಂಟಿಯಾಗಿ ಬರುವ ಎಲ್ಲಾ ವರ್ಗದ ಮಹಿಳೆಯರು ಯಾವುದೇ ರೀತಿಯಲ್ಲಿ ಹಣ ಪಾವತಿಸದೆ 3 ದಿನಗಳ ಕಾಲ ಉಚಿತ ಊಟೋಪಹಾರ ಮತ್ತು ಸುರಕ್ಷಿತ ವಸತಿ ಸೌಲಭ್ಯವನ್ನು ಟ್ರಾನ್ಸಿಟ್‌ ಹಾಸ್ಟೆಲ್‌ಗಳಲ್ಲಿ ಪಡೆಯಬಹುದಾಗಿದೆ. ಈ ಸೌಲಭ್ಯಗಳನ್ನು ನೀಡಲು ಬೆಂಗಳೂರಿನಾದ್ಯಂತ 13 ಟ್ರಾನ್ಸಿಟ್ ವಸತಿ ನಿಲಯಗಳನ್ನು ಆರಂಭಿಸಲಾಗಿದೆ. ಅವುಗಳ ಪಟ್ಟಿಯನ್ನು ಈ ಕೆಳಗಿನಂತೆ ನೀಡಲಾಗಿದೆ.

List of Working womens hostels functioning in the state with address and Telephone Number (13 Transit Hostels list of Bengalore)

You may also like