Home » ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಅಹ್ವಾನ: ಆನ್‌ಲೈನ್‌ನಲ್ಲಿಯೇ ಅರ್ಜಿ ಸಲ್ಲಿಸಬೇಕು

ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಅಹ್ವಾನ: ಆನ್‌ಲೈನ್‌ನಲ್ಲಿಯೇ ಅರ್ಜಿ ಸಲ್ಲಿಸಬೇಕು

by manager manager

ಕರ್ನಾಟಕ ಸರ್ಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಾಮಾನ್ಯ ಹಾಗೂ ಮಾದರಿ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಸಾಮಾನ್ಯ ಹಾಗೂ ಮಾದರಿ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊ‍ಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2A, 2B, 3A, 3B, ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2018-19ನೇ ಸಾಲಿಗೆ ಅರ್ಜಿ ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳ ಆದಾಯ ಮಿತಿ

-ಪ್ರವರ್ಗ-1, ಎಸ್‌.ಸಿ &ಎಸ್‌.ಟಿ – 2.50 ಲಕ್ಷ ರೂ

-ಪ್ರವರ್ಗ-2A, 2B, 3A, 3B ಮತ್ತು ಇತರೆ ಹಿಂದುಳಿದ ವರ್ಗ ಹಾಗೂ ಇತರೆ – 1.00 ಲಕ್ಷ ರೂ

 

– ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು www.backwardclasses.kar.nic.in ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ

– ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20/07/2018

– ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ ಮತ್ತು ಮಾನದಂಡಗಳನ್ನು ಇಲಾಖೆಯ ಮೇಲಿನ ವೆಬ್‌ಸೈಟ್‌ನಲ್ಲಿಯೇ ತಿಳಿಯಬಹುದು.

– ಅರ್ಜಿ ಸಲ್ಲಿಸುವಾಗ ಯಾವುದಾದರೂ ತಾಂತ್ರಿಕ ದೋಷಗಳಾದಲ್ಲಿ ವಿದ್ಯಾರ್ಥಿಗಳು bcw.hostels@karnataka.gov.in ge ಇಮೇಲ್ ಮುಖಾಂತರ ಪ್ರತಿಕ್ರಿಯೆ ನೀಡಬಹುದು. ಅಥವಾ ಜಿಲ್ಲಾ, ತಾಲ್ಲೂಕುಗಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.

ಸಹಾಯವಾಣಿ ನಂಬರ್- 080-8050370006

Department of backwardclasses invited application’s to post-matric subsequent boys and girls hostels. The last date for apply 20/07/2018.

You may also like