Home » ಹಿಂದುಳಿದ ವರ್ಗಗಳ ಇಲಾಖೆಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ

ಹಿಂದುಳಿದ ವರ್ಗಗಳ ಇಲಾಖೆಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ

by manager manager

ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಂದ 2018-19ನೇ ಸಾಲಿಗೆ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಅಹ್ವಾನಿಸಿದೆ.

ಈ ಹಿಂದೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಸಲ್ಲಿಸಲು 30/09/018 ದಿನಾಂಕವನ್ನು ನಿಗದಿಪಡಿಸಿತ್ತು. ಆದರೆ ಈಗ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ನೇ ತಾರೀಖಿನವರೆಗೂ ದಿನಾಂಕವನ್ನು ವಿಸ್ತರಿಸಲಾಗಿದೆ.

-ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ: 15/10/2018

-ಅರ್ಜಿ ಸಲ್ಲಿಸಲು ಅಗತ್ಯವಾಗಿ ಬೇಕಾದ ದಾಖಲೆಗಳು ಈ ಕೆಳಗಿ ನಂತಿವೆ

* ಶಾಲೆಯಲ್ಲಿ ಪ್ರವೇಶ ಪಡೆದಿರುವ ಬಗ್ಗೆ ಸ್ಯಾಟ್ಸ್‌ ಐಡಿ(ಸ್ಯಾಟ್ಸ್-ಐಡಿ ತಿಳಿಯಲು ವೆಬ್ ವಿಳಾಸ www.sts.karnataka.gov.in)

* ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಸಂಖ್ಯೆ

* ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರಗಳ ಆರ್‌ ಡಿ ಸಂಖ್ಯೆ

* ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ ಪಡೆದಿದ್ದಲ್ಲಿ ವಿದ್ಯಾರ್ಥಿ ನಿಲಯ ಪ್ರವೇಶ ಸಂಖ್ಯೆ(ಸಂಬಂಧಿಸಿದ ಇಲಾಖೆಯಿಂದ ಪಡೆದಿದ್ದು)

* ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿ ವೇತನ ಪಡೆದಿದ್ದಲ್ಲಿ ಅರ್ಜಿ ಸಂಖ್ಯೆ.

* ಆಧಾರ್ ಇಲ್ಲದಿದ್ದಲ್ಲಿ, ಆಧಾರ್‌ಗಾಗಿ ಅರ್ಜಿ ಸಲ್ಲಿಸಿರುವ ಇ.ಇ.ಡಿ ಸಂಖ್ಯೆ. ಬ್ಯಾಂಕ್ ಖಾತೆ ಸಂಖ್ಯೆ ಹಾಗೂ ಐಎಫ್‌ಎಸ್‌.ಸಿ ಸಂಖ್ಯೆ

– ವಿದ್ಯಾರ್ಥಿ ವೇತನದ ಸೌಲಭ್ಯ ವಿವರಗಳನ್ನು(ವೇತನ ದರ ತಿಂಗಳಿಗೆ) ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ

-ಸರ್ಕಾರಿ ಆದೇಶದ ಪ್ರಕಾರ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ನೀಡಬಬೇಕಾದ ತಿಂಡಿ, ಊಟಗಳ ಮೆನು ಚಾರ್ಟ್ ವಿವರ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ

ವಿದ್ಯಾರ್ಥಿಗಳಿಗೆ ಸೂಚನೆ: ವಿದ್ಯಾರ್ಥಿಗಳು ಆಧಾರ್ ಸಂಖ್ಯೆಯನ್ನು ಖಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡಿಸತಕ್ಕದ್ದು. ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸದಿದ್ದಲ್ಲಿ ಯಾವುದೇ ಸೌಲಭ್ಯ ಮಂಜೂರಾಗುವುದಿಲ್ಲ.

Karnataka Backward Classes invited application for Scholarship from Pre Metric students. Here students parents can know full details related to apply for scholarship.

You may also like