Home » ಪರಿಹಾರ ಧನಕ್ಕಾಗಿ ಸೇವಾ ಸಿಂಧು ಮೂಲಕ ಅರ್ಜಿ ಆಹ್ವಾನ

ಪರಿಹಾರ ಧನಕ್ಕಾಗಿ ಸೇವಾ ಸಿಂಧು ಮೂಲಕ ಅರ್ಜಿ ಆಹ್ವಾನ

by manager manager

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಕರ್ನಾಟಕ ಸರ್ಕಾರವು ಕೋವಿಡ್-19 ಲಾಕ್‌ಡೌನ್ ಪ್ರಯುಕ್ತ ವಿಶೇಷ ಪ್ಯಾಕೇಜ್‌ನಲ್ಲಿ ಚರ್ಮ ಕುಶಲಕರ್ಮಿಗಳು/ ಚಮ್ಮಾರರನ್ನು ಗುರುತಿಸಿ ಪರಿಹಾರ ಧನವನ್ನು ವಿತರಣೆ ಮಾಡುವ ಸಲುವಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಡಿಬಿಟಿ ಮೂಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಪರಿಹಾರ ಧನವನ್ನು ಪಡೆಯಲು ಚರ್ಮ ವೃತ್ತಿಯಲ್ಲಿ ತೊಡಗಿರುವ ಬಗ್ಗೆ ವೃತ್ತಿ ಪ್ರಮಾಣ ಪತ್ರವನ್ನು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾಮಟ್ಟದ ಉಪನಿರ್ದೇಶಕರು ಹಾಗೂ ತಾಲ್ಲೂಕಿನ ಸಹಾಯಕ ನಿರ್ದೇಶಕರುಗಳು ನೀಡಲು ಕ್ರಮವಹಿಸುವಂತೆ ಬೆಂಗಳೂರು ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಡಾ. ಬಾಬು ಜಗಜೀವನ ರಾಂ ರವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಮಟ್ಟದ ಸಹಾಯಕ ನಿರ್ದೇಶಕರ ಕಛೇರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿಯನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂಗಾರು ಹಂಗಾಮಿನ ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆ: ವಿಮಾ ಕಂತು ಪಾವತಿಗೆ ಜೂ.30 ಕೊನೆ