ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ’ಯು ಏಪ್ರಿಲ್ 21 ರಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2023 ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಒಟ್ಟು 7,02,067 ವಿದ್ಯಾರ್ಥಿಗಳ ಪೈಕಿ 5,24,209 ವಿದ್ಯಾರ್ಥಿಗಗಳು ತೇರ್ಗಡೆಯಾಗಿದ್ದಾರೆ. ಕಲಾ ವಿಭಾಗದಲ್ಲಿ 1,34,876 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 1,82,246 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2,07,087 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದು ಪಾಸಾದವರು 1,83,221 ವಿದ್ಯಾರ್ಥಿಗಳು, ಇಂಗ್ಲಿಷ್ ಮಾಧ್ಯಮದಲ್ಲಿ ಪರೀಕ್ಷೆ ಬರೆದು ಪಾಸಾದವರು 3,40,988 ವಿದ್ಯಾರ್ಥಿಗಳು. ಶೇಕಡ 85 ಕ್ಕಿಂತ ಹೆಚ್ಚಿನ ಅಂಕಪಡೆದು 1,09,509 ವಿದ್ಯಾರ್ಥಿಗಳು ಪಾಸಾಗಿದ್ದಾರೆ.
ದಕ್ಷಿಣ ಕನ್ನಡ ಶೇಕಡ.95.33 ಫಲಿತಾಂಶವನ್ನು, ಉಡುಪಿ 95.24 ಶೇಕಡ ಫಲಿತಾಂಶವನ್ನು, ಕೊಡಗು ಶೇಕಡ.90.55 ಫಲಿತಾಂಶವನ್ನು ಪಡೆದುಕೊಂಡಿವೆ.
Karnataka 2nd PUC Result 2022-23 – Click Here
ದ್ವಿತೀಯ ಪಿಯುಸಿ ಫಲಿತಾಂಶ ಚೆಕ್ ಮಾಡುವುದು ಹೇಗೆ?
- ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧಿಕೃತ ವೆಬ್‌ಸೈಟ್ ಅಥವಾ www.karresults.nic.in ಗೆ ಭೇಟಿ ನೀಡಿ.
- ಓಪನ್ ಆದ ಪೇಜ್‌ನಲ್ಲಿ ಪಿಯುಸಿ ಫಲಿತಾಂಶಕ್ಕೆ ಸಂಬಂಧಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಇಲಾಖೆಯ ಇನ್ನೊಂದು ಪೇಜ್ ಓಪನ್ ಆಗುತ್ತದೆ.
- ಓಪನ್ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಟೈಪ್ ಮಾಡಿ. ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
- ಫಲಿತಾಂಶ ಪ್ರದರ್ಶನವಾಗುತ್ತದೆ. ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು
ಉತ್ತರ ಪತ್ತಿಕೆಯ ಸ್ಕ್ಯಾನಿಂಗ್ ಪ್ರತಿಗಾಗಿ ಅರ್ಜಿ ಸಲ್ಲಿಸಲು ಪ್ರಾರಂಭ ಮತ್ತು ಕೊನೆಯ ದಿನಾಂಕ : 21-04-2023 ರಿಂದ 27-04-2023 ರವರೆಗೆ.
ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಲು ಪ್ರಾರಂಭ ಮತ್ತು ಕೊನೆಯ ದಿನಾಂಕ: 26-04-2023 ರಿಂದ 02-05-2023 ರವರೆಗೆ.
ಮರುಮೌಲ್ಯಮಾಪನಕ್ಕಾಗಿ ಹಾಗೂ ಮರುಏಣಿಕೆಗಾಗಿ ಅರ್ಜಿ ಸಲ್ಲಿಸಲು ಅವಕಾಶ : 03-05-2023 ರಿಂದ 08-05-2023 ರವರೆಗೆ.
ಸ್ಕ್ಯಾನಿಂಗ್ ಪ್ರತಿ ಪಡೆಯಲು ಶುಲ್ಕ ರೂ.530.
ಮರುಮೌಲ್ಯಮಾಪನದ ಶುಲ್ಕ ರೂ.1670 ವರೆಗೆ.