Home » ಹೈನುಗಾರಿಕೆ, ಕುರಿ, ಮೇಕೆ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಹೈನುಗಾರಿಕೆ, ಕುರಿ, ಮೇಕೆ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

by manager manager

ಹಾವೇರಿ
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಮೂರು ದಿನಗಳ ಕುರಿ ಮತ್ತು ಮೇಕೆ ಸಾಕಾಣಿಕೆ, ಹೈನುಗಾರಿಕೆ ತರಬೇತಿಯನ್ನು ಡಿಸೆಂಬರ್ 2020 ರಿಂದ ಮಾರ್ಚ್-2021ರವರೆಗೆ ರೈತ ಹಾಗೂ ರೈತ ಮಹಿಳೆಯರಿಗೆ ಧಾರವಾಡ ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದೆ.

ಧಾರವಾಡ, ಗದಗ, ಹಾವೇರಿ ಹಾಗೂ ಕಾರವಾರ ಜಿಲ್ಲೆಗಳ ರೈತ ಹಾಗೂ ರೈತ ಮಹಿಳೆಯರಿಗೆ ಉಚಿತ ತರಬೇತಿ ನೀಡಲಾಗುವುದು. ಆಸಕ್ತರು ತಮ್ಮ ಹೆಸರನ್ನು ಎಸ್‌ಎಂಎಸ್‌ ಮೂಲಕ ಅಥವಾ ಕಚೇರಿಯ ದೂರವಾಣಿಗೆ ಕರೆ ಮಾಡಿ ಅಥವಾ ಖುದ್ದು ಕಚೇರಿಗೆ ಭೇಟಿ ನೀಡಿ ತಮ್ಮ ಹೆಸರನ್ನು ರಿಜಿಸ್ಟರ್‌ ಮಾಡಿಕೊಳ್ಳಬಹುದು ಎಂದು ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದ ಉಪನಿರ್ದೇಶಕರು ತಿಳಿಸಿದ್ದಾರೆ.

ಮಾಹಿತಿಗಾಗಿ ದೂರವಾಣಿ ಸಂಖ್ಯೆ:.0836-2443743 ಹಾಗೂ ಮೊ.9591024499ನ್ನು ಸಂಪರ್ಕಿಸಬಹುದು.