ಬಾಗಲಕೋಟೆ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ವಿಜ್ಞಾನ ಮತ್ತು ಇಂಜಿನೀಯರಿಂಗ್‍ನಲ್ಲಿ ಪಿಎಚ್‍ಡಿ ಸಂಶೋಧನೆಗೆ ಕರ್ನಾಟಕ ಡಿಎಸ್‍ಟಿ, ಪಿಎಚ್‍ಡಿ ಶಿಷ್ಯವೇತನ ನೀಡುವ ಸಲುವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಸಂಸ್ಥೆ, ಕಾಲೇಜುಗಳಲ್ಲಿ ಈಗಾಗಲೇ ಪಿಎಚ್‍ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಕೊನೆಯ ದಿನ ಅಕ್ಟೋಬರ 12 ಆಗಿದೆ.
ಹೆಚ್ಚಿನ ಮಾಹಿತಿಗಾಗಿ ಜಾಲತಾಣ http://ksteps.karnataka.gov.in ಸಂಪರ್ಕಿಸುವಂತೆ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.