Home » ಕೋವಿಡ್‍ನಿಂದ ಮೃತರಾದ ಕುಟುಂಬಗಳಿಗೆ ತಲಾ ಒಂದು ಲಕ್ಷ ಪರಿಹಾರ ವಿತರಿಸಿದ ಸಿಎಂ

ಕೋವಿಡ್‍ನಿಂದ ಮೃತರಾದ ಕುಟುಂಬಗಳಿಗೆ ತಲಾ ಒಂದು ಲಕ್ಷ ಪರಿಹಾರ ವಿತರಿಸಿದ ಸಿಎಂ

by manager manager

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವ ಹಾಗೂ ಸವಣೂರು ತಾಲೂಕಿನಲ್ಲಿ ಕೋವಿಡ್-19 ಸೋಂಕಿನಿಂದ ಮೃತರಾದ ಕುಟುಂಬಗಳಿಗೆ ತಲಾ ಒಂದು ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದರು.

ಭಾನುವಾರ ಶಿಗ್ಗಾಂವನ ಪುರಸಭಾ ಕಾರ್ಯಾಲಯದಲ್ಲಿ ಜಿಲ್ಲಾಡಳಿತ ಆಯೋಜಿಸಿದ ಕಾರ್ಯಕ್ರಮದಲ್ಲಿ ಶಿಗ್ಗಾಂವ ಹಾಗೂ ಸವಣೂರಿನ 37 ಮೃತರಾದ ಕುಟುಂಬಗಳಿಗೆ ಒಂದು ಲಕ್ಷ ರೂಪಾಯಿಗಳ ಚೆಕ್ ವಿತರಣೆ ಮಾಡಿದರು.

ಇದೇ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರಗೇಶ ನಿರಾಣಿ, ಪುರಸಭೆ ಅಧ್ಯಕ್ಷ ಪ್ರಶಾಂತ ಬುಳ್ಳಪ್ಪನವರ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಣಾಧಿಕಾರಿ ಮಹಮ್ಮದ್ ರೋಷನ್, ಉಪವಿಭಾಗಾಧಿಕಾರಿ ಶ್ರೀಮತಿ ಅನ್ನಪೂರ್ಣ ಮುದಕಮ್ಮನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.

‘ಭದ್ರಾ ಮೇಲ್ದಂಡೆ ಯೋಜನೆ’ ರಾಷ್ಟ್ರೀಯ ಯೋಜನೆ ಎಂದು ಘೋಷಿಸುವ ಕುರಿತು ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ: ಸಿಎಂ ಬಸವರಾಜ ಬೊಮ್ಮಾಯಿ

You may also like