Home » ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಅಪ್ಲಿಕೇಶನ್ ಬಿಡುಗಡೆ

ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಅಪ್ಲಿಕೇಶನ್ ಬಿಡುಗಡೆ

by manager manager

ಕರ್ನಾಟಕ ಸರ್ಕಾರದ ಇ-ಆಡಳಿತ ಮತ್ತು ಕೃಷಿ ಇಲಾಖೆಯ ಸಹಯೋಗದೊಂದಿಗೆ 2020-21 ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಅಪ್ಲಿಕೇಶನ್‌ ಹಾಗೂ ಖಾಸಗಿ ನಿವಾಸಿಗಳ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಬಿಡುಗಡೆ ಮಾಡಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ರೈತರು ಗೂಗಲ್ ಪ್ಲೇಸ್ಟೋರ್‍ನಿಂದ “ಹಿಂಗಾರು ರೈತರ ಬೆಳೆ ಸಮೀಕ್ಷೆ 2020-21” ಅಪ್ಲಿಕೇಶನ್ ಡೌನ್‌ಲೋಡ್‌ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿಯೊಂದಿಗೆ ಜಿ.ಪಿ.ಎಸ್ ಛಾಯಾಚಿತ್ರವನ್ನು ಅಪ್‌ಲೋಡ್‌ ಮಾಡಬಹುದಾಗಿರುತ್ತದೆ. ಸದರಿ ಮಾಹಿತಿಯನ್ನು ಬೆಳೆವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಯಡಿ ದೊರೆಯುವ ಸವಲತ್ತುಗಳನ್ನು ಒದಗಿಸಲು ಬಳಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಆದ್ದರಿಂದ ರೈತರು ಹೆಚ್ಚಿನ ಆಸಕ್ತಿಯೊಂದಿಗೆ ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ರೈತರು ತಾವೇ ಖುದ್ದಾಗಿ ತಮ್ಮ ಆಂಡ್ರಾಯ್ಡ್‌ ಮೊಬೈಲ್‌ಗಳ ಮೂಲಕ ದಾಖಲಿಸಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಆಯಾ ಗ್ರಾಮಗಳಿಗೆ ನಿಯೋಜಿಸಿದ ಖಾಸಗಿ ನಿವಾಸಿಗಳ ಸಹಾಯದೊಂದಿಗೆ ಬೆಳೆ ಮಾಹಿತಿಯನ್ನು ದಾಖಲಿಸಲು ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

2021 ರಲ್ಲಿ ತೆರೆಕಾಣಲು ಸಜ್ಜಾಗಿರುವ ಕನ್ನಡ ಸಿನಿಮಾಗಳಿವು..

You may also like