Home » ಗ್ರಾಮ ಪಂಚಾಯತಿಗಳಲ್ಲಿ ಕಂಪ್ಯೂಟರ್ ಡಾಟಾ ಎಂಟ್ರಿ ಆಪರೇಟರ್ ಹುದ್ದೆ: ಅರ್ಜಿ ಆಹ್ವಾನ

ಗ್ರಾಮ ಪಂಚಾಯತಿಗಳಲ್ಲಿ ಕಂಪ್ಯೂಟರ್ ಡಾಟಾ ಎಂಟ್ರಿ ಆಪರೇಟರ್ ಹುದ್ದೆ: ಅರ್ಜಿ ಆಹ್ವಾನ

by manager manager
grama panchayat data entry operator

Data Entry Operators recruitment 2018 in Grama Panchayath Offices of Karnataka state

ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿಯೂ ಕಂಪ್ಯೂಟರ್ ಡಾಟಾ ಎಂಟ್ರಿ ಆಪರೇಟರ್ (
Data Entry Operators )ಹುದ್ದೆಯನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪ್ರಕಟಣೆ ಹೊರಡಿಸಿದೆ.

ಈ ಕಂಪ್ಯೂಟರ್ ಡಾಟಾ ಎಂಟ್ರಿ ಆಪರೇಟರ್ ಹುದ್ದೆಯನ್ನು ಒಂದು ಗ್ರಾಮ ಪಂಚಾಯಿತಿ ಕಛೇರಿಗೆ ಒಂದು ಹುದ್ದೆಯಂತೆ ನೇರ ನೇಮಕಾತಿ ಮಾಡಲಿದೆ ಎಂದು ತಿಳಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ ನಲ್ಲಿ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಯ ಹೆಸರು : ಕಂಪ್ಯೂಟರ್ ಡಾಟಾ ಎಂಟ್ರಿ ಆಪರೇಟರ್

ಹುದ್ದೆಗಳ ಸಂಖ್ಯೆ : ಪ್ರತಿ ಗ್ರಾಮ ಪಂಚಾಯಿತಿ ಕಛೇರಿಗೆ ಒಂದು ಹುದ್ದೆ.

ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ/ಐಟಿಐ/ಡಿಪ್ಲೊಮೊ ಪಾಸ್ ಯಾವುದಾದರೂ.

-ಅಭ್ಯರ್ಥಿಗಳನ್ನು ಅವರು ಗಳಿಸಿದ ಶೇಕಡವಾರು ಅಂಕಗಳ ಆಧಾರದಲ್ಲಿ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ವೇತನ ಶ್ರೇಣಿ : ಆರಂಭದಲ್ಲಿ 12000 ಕನಿಷ್ಠ. ಹೆಚ್ಚಿನ ಮಾಹಿತಿಗೆ ಹತ್ತಿರದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಿ.

ವಯೋಮಿತಿ :

ಅರ್ಜಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 18 ವರ್ಷ ಪೂರೈಸಿರಬೇಕು.

ಸಾಮಾನ್ಯ ವರ್ಗ ಗರಿಷ್ಠ : 35 ವರ್ಷ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : 40 ವರ್ಷ

ಪ್ರವರ್ಗ 2ಎ/ಬಿ/3ಎ/3ಬಿ : 38 ವರ್ಷ

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ 150

ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ. 150

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : ರೂ. 150

– ಅರ್ಜಿ ಶುಲ್ಕವನ್ನು ಡಿಡಿ ಅಥವಾ ಪೋಸ್ಟಲ್ ಆರ್ಡರ್ ತೆಗೆಯುವುದು.

– ಒಂದಕ್ಕಿಂತ ಹೆಚ್ಚಿನ ಗ್ರಾಮ ಪಂಚಾಯಿತಿಗಳಿಗೆ ಅರ್ಜಿ ಸಲ್ಲಿಸುವವರು ಪ್ರತ್ಯೇಕ ಅರ್ಜಿ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 16-11-2017

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-12-2017

Karnataka Government Rural Development and Panchayath Raj Department has invited application for post of Data Entry Operators in Grama Panchayath Offices of Karnataka state.

You may also like