Home » ಕೃಷಿ ಇಲಾಖೆಯಿಂದ ಟಾರ್ಪಾಲಿನ್ ವಿತರಣೆ: ರೈತರಿಂದ ಅರ್ಜಿ ಆಹ್ವಾನ

ಕೃಷಿ ಇಲಾಖೆಯಿಂದ ಟಾರ್ಪಾಲಿನ್ ವಿತರಣೆ: ರೈತರಿಂದ ಅರ್ಜಿ ಆಹ್ವಾನ

by manager manager

ಮೈಸೂರು- 2020-21 ನೇ ಸಾಲಿಗೆ ಕೃಷಿ ಇಲಾಖೆಯ ವತಿಯಿಂದ ಕೃಷಿ ಉತ್ಪನ್ನಗಳ ಸಂಸ್ಕರಣೆಗಾಗಿ ಬಳಸಲಾಗುವ 8*6 ಮೀಟರ್ ಅಳತೆಯ ಟಾರ್ಪಾಲಿನ್‍ಗಳನ್ನು ಮೈಸೂರು ಜಿಲ್ಲೆಯ ರೈತರಿಗೆ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.ರೈತರು ಆಯಾ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಡಿಸೆಂಬರ್ 10 ರೊಳಗೆ ಅರ್ಜಿಸಲ್ಲಿಸಬಹುದು. ಅರ್ಜಿಯೊಂದಿಗೆ ಅಧಿಕೃತು ಗುರುತಿನ ಚೀಟಿ, ಪಹಣಿ (ಆರ್‌ಟಿಸಿ), ಬ್ಯಾಂಕ್ ಪಾಸ್‌ಬುಕ್‌, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ನೀಡಿ ನೋಂದಾಯಿಸಿಕೊಳ್ಳಬೇಕು.

ಹೋಬಳಿವಾರು ನಿಗಧಿಪಡಿಸಿದ ಸಂಖ್ಯೆಗಿಂತ ಹೆಚ್ಚಿನ ಅರ್ಜಿಗಳು ಸ್ವೀಕೃತವಾದಲ್ಲಿ ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಈಗಾಗಲೇ ಸಹಾಯಧನದಲ್ಲಿ ಟಾರ್ಪಾಲಿನ್ ಪಡೆದ ರೈತರನ್ನು ಪ್ರಸಕ್ತ ಸಾಲಿಗೆ ಪರಿಗಣಿಸುವುದಿಲ್ಲ. ಕಳೆದ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಲಾಟರಿಯಲ್ಲಿ ಆಯ್ಕೆಯಾಗದ ಅರ್ಜಿಗಳನ್ನು ಪ್ರಸಕ್ತ ವರ್ಷದಲ್ಲಿ ಪರಿಗಣಿಸಲಾಗುವುದು.

ಹೆಚ್ಚಿನ ವಿವರಗಳಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.