Home » FDA ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ

FDA ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ

by manager manager

final selection list of the candidates for the post of FDA - 2016

2016 ರಲ್ಲಿ ಕೆಪಿಎಸ್‌ಸಿ ಹೊರಡಿಸಿದ್ದ ಪ್ರಥಮ ದರ್ಜೆ ಸಹಾಯಕ ಹುದ್ದೆ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟಗೊಂಡಿದೆ.

ಕೆಪಿಎಸ್‌ಸಿ ಅಂದು 2016 ರಲ್ಲಿ ಹೊರಡಿಸಿದ್ದ ಹೈದರಾಬಾದ್ ಕರ್ನಾಟಕದ 74 ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 389 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಆ ಅಂತಿಮ ಆಯ್ಕೆ ಪಟ್ಟಿಯನ್ನು ಕೆಪಿಎಸ್‌ಸಿ ಆಯೋಗ ತನ್ನ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಿಸಿದೆ.

ಪ್ರಸ್ತುತ ಪ್ರಕಟಣೆಗೊಳಿಸಿರುವ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರು, ವಿಳಾಸ, ಪರೀಕ್ಷೆಯಲ್ಲಿ ಪಡೆದ ಅಂಕಗಳ ಮಾಹಿತಿಯನ್ನು ಒದಗಿಸಲಾಗಿದೆ. ಈ ನೇಮಕಕ್ಕೆ ಸಂಬಂಧಿಸಿದಂತೆ ಆಯೋಗವು ಆಗಸ್ಟ್ ನಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿತ್ತು. ಈಗ ಎಲ್ಲಾ ಪರಿಶೀಲನೆ ಮುಗಿಸಿದ್ದು ಅಂತಿಮ ಆಯ್ಕೆಪಟ್ಟಿ ಪ್ರಕಟಿಸಿದೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಸಾರಿಗೆ ಇಲಾಖೆ, ಕಾನೂನು ಇಲಾಖೆ, ವಿವಿಧ ಜಿಲ್ಲಾಧಿಕಾರಿಗಳ ಕಾರ್ಯಾಲಯ ಸೇರಿದಂತೆ ಒಟ್ಟು 25ಕ್ಕೂ ಹೆಚ್ಚು ಇಲಾಖೆಗಳಲ್ಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಪ್ರಕ್ರಿಯೆ ನಡೆದಿತ್ತು.

2016 ರ FDA ಹುದ್ದೆಯ ಅಂತಿಮ ಆಯ್ಕೆ ಪಟ್ಟಿ ನೋಡಲು ಇಲಾಖಾ ವೆಬ್‌ಸೈಟ್ www.kpsc.kar.nic.in ಗೆ ಭೇಟಿ ನೀಡಿ.

ಅಥವಾ ಈ ಲಿಂಕ್ ಕ್ಲಿಕ್ ಮಾಡಿ

Karnataka Public Service Comission published The final selection list of the candidates for the post of FDA – 2016.

You may also like