Home » ಹಾಸನ ಜಿಲ್ಲೆ ಗ್ರಾಮ ಲೆಕ್ಕಾಧಿಕಾರಿಗಳ(VA) ಹುದ್ದೆಗೆ ಅರ್ಜಿ: ಡಿ.20 ಕೊನೆ ದಿನ

ಹಾಸನ ಜಿಲ್ಲೆ ಗ್ರಾಮ ಲೆಕ್ಕಾಧಿಕಾರಿಗಳ(VA) ಹುದ್ದೆಗೆ ಅರ್ಜಿ: ಡಿ.20 ಕೊನೆ ದಿನ

by manager manager

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಹಾಸನ ಜಿಲ್ಲಾ ಘಟಕದಲ್ಲಿ ಬರುವ ತಾಲ್ಲೂಕುಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ(Village Accountants) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2016ನೇ ಸಾಳಲಿನ ನೇಮಕಾತಿ ಪ್ರಕ್ರಿಯೆಯ ನಂತರ ವಯೋನಿವೃತ್ತಿ, ರಾಜೀನಾಮೆ, ಮುಂಬಡ್ತಿ, ವರ್ಗಾವಣೆ, ಇನ್ನಿತರ ಕಾರಣಗಳಿಂದ ತೆರವಾಗಿರುವ ಗ್ರಾಮಲಿಕ್ಕಿಗರ ಹುದ್ದೆಗಳನ್ನು, ಕರ್ನಾಟಕ ಸಾಮಾನ್ಯ ಸೇವೆಗಳು (ರೆವಿನ್ಯೂ ಸಬೊರ್ಡಿನೇಟ್ ಬ್ರಾಂಚ್), ಕೇಡರ್ ಅಂಡ್ ರೆಕ್ರ್ಯೂಟ್‌ಮೆಂಟ್, ತಿದ್ದುಪಡಿ, ನಿಯಮಗಳು 2008 ಮತ್ತು 2009 ರನ್ವಯ ನೇರ ನೇಮಕಾತಿ ಮೂಲಕ ಸರ್ಕಾರದ ಆದೇಶಗಳನ್ವಯ ಈ ಖಾಲಿ ಗ್ರಾಮಲೆಕ್ಕಿಗರ(Village Accountant) ಹುದ್ದೆಗಳನ್ನು ಭರ್ತಿ ಮಾಡಲು ಪ್ರಕಟಣೆ ಹೊರಡಿಸಲಾಗಿದೆ.

ಹುದ್ದೆಯ ಹೆಸರು : ಗ್ರಾಮ ಲೆಕ್ಕಿಗರು (Village Accountent)

ಒಟ್ಟು ಹುದ್ದೆಗಳ ಸಂಖ್ಯೆ : 61

ಅರ್ಜಿಗಳನ್ನು ಸಲ್ಲಿಸಲು ಆರಂಭಿಕ ದಿನಾಂಕ: 20-11-2018

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20-12-2018

ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 21-12-2018

– ಶುಲ್ಕ ಪಾವತಿಸಿದ ಚಲನ್‌ ಅನ್ನು ಅಪ್‌ಲೋಡ್‌ ಮಾಡಲು 21-12-2018 ಕೊನೆಯ ದಿನಾಂಕ.

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ 300

ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ.150

ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ.150

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : ಶುಲ್ಕ ವಿನಾಯಿತಿ ನೀಡಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ:

ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ನಡೆಸುವ ದ್ವಿತೀಯ ಪಿಯುಸಿ ಅಥವಾ ಸಿಬಿಎಸ್‌ಇ, ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ :

ಅರ್ಜಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 18 ವರ್ಷ ಪೂರೈಸಿರಬೇಕು.

ಸಾಮಾನ್ಯ ವರ್ಗ ಗರಿಷ್ಠ : 35 ವರ್ಷ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : 40 ವರ್ಷ

ಪ್ರವರ್ಗ 2ಎ/ಬಿ/3ಎ/3ಬಿ : 38 ವರ್ಷ

ಅರ್ಜಿ ಸಲ್ಲಿಸುವುದು ಹೇಗೆ?

ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗಿದ್ದು, ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯ ಅಧಿಕೃತ ವೆಬ್‌ಸೈಟ್ http://hassan-va.kar.nic.in/ ಗೆ ಭೇಟಿ ನೀಡಿ ಸಲ್ಲಿಸಬೇಕು.

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮೂಲಕ ಆನ್‌ಲೈನ್‌ ನಲ್ಲಿ ಪೇ ಮಾಡಬಹುದು. ಅಥವಾ ಚಲನ್ ಪ್ರಿಂಟ್ ತೆಗೆದುಕೊಂಡು ಯಾವುದೇ ಎಸ್‌ಬಿಐ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಸೂಚನೆ: ಯಾವುದೇ ರೀತಿಯ ದಾಖಲೆಗಳನ್ನು ಅರ್ಜಿಗಳೊಂದಿಗೆ ಸಲ್ಲಿಸುವ ಅಗತ್ಯವಿರುವುದಿಲ್ಲ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ ಅನ್ನು ಪರಿಶೀಲಿಸಲು ಕೋರಲಾಗಿದೆ.

ಇನ್ನೂ ಹೆಚ್ಚಿನ ಮಾಹಿತಿಗೆ ಕ್ಲಿಕ್ ಮಾಡಿರಿ

Hassan District Village Accountent Recruitment 2018 – Click Here

Karnataka revenue department invited application for the post of Hassan district Village Accountant(VA) 2018. Read full details here to apply for the VA job.

You may also like