Home » ಯೋಗ ಮಾಡುವುದರಿಂದ ಆಗುವ 10 ಪ್ರಯೋಜನಗಳು

ಯೋಗ ಮಾಡುವುದರಿಂದ ಆಗುವ 10 ಪ್ರಯೋಜನಗಳು

by manager manager

ಯೋಗವು ಭಾರತದ ಪುರಾತನ ವ್ಯಾಯಮಗಳಲ್ಲಿ ಒಂದು. ಯೋಗಕ್ಕೆ ೩೦೦೦ ವರ್ಷಗಳಿಗಿಂತ ಹೆಚ್ಚು ಇತಿಹಾಸವಿದೆ. “ಯೋಗ ಎಂಬುದು ಭಾರತೀಯ ಸಂಸ್ಕೃತಿ ವಿಶ್ವಕ್ಕೆ ನೀಡಿದ ಅತ್ಯುತ್ತಮ ಕೊಡುಗೆಯಾಗಿದೆ. ಯೋಗ ವ್ಯಾಯಾಮ ಮಾತ್ರವಲ್ಲದೆ ನಿಮ್ಮೊಂದಿಗೆ, ವಿಶ್ವ ಹಾಗೂ ಪ್ರಕೃತಿಯ ಜೊತೆಗೆ ಏಕತೆಯ ಅರ್ಥವನ್ನು ಕಂಡುಹಿಡಿಯಲು ನೆರವಾಗುತ್ತದೆ.

ನಮ್ಮ ಜೀವನಶೈಲಿ ಹಾಗೂ ಪ್ರಜ್ಞೆ ರಚಿಸುವ ಮೂಲಕ ಹಮಾಮಾನ ಬದಲಾವಣೆ ನಿಭಾಯಿಸಲು ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಯೋಗ ಸಹಾಯ ಮಾಡುತ್ತದೆ. ಯೋಗ ಮನಸ್ಸು ಮತ್ತು ದೇಹಗಳೆರಡನ್ನು ಐಕ್ಯಗೊಳಿಸಿ, ಆರೋಗ್ಯ ಮತ್ತು ಸ್ವಸ್ಥ ಮನಸ್ಸನ್ನು ಪಡೆಯಲು ಸಹಕರಿಸುತ್ತದೆ.

ನಿತ್ಯ ನಿಯಮಿತವಾಗಿ ಯೋಗ ಮಾಡುವುದರಿಂದ ಮನುಷ್ಯನ ದೇಹ ಸ್ಥಿತಿ ಹತೋಟಿಯಲ್ಲಿರುತ್ತದೆ. ರಕ್ತದೊತ್ತಡ, ತೂಕ ಕಡಿಮೆ ಮಾಡಿಕೊಳ್ಳಲು, ಒತ್ತಡವನ್ನು ಕಡಿಮೆ ಮಾಡುವುದು, ಸಕ್ಕರೆ ಕಾಯಿಲೆ, ಮಾನಸಿಕ ಚಿಂತನೆ ದೂರವಾಗಲು ಮತ್ತು ಕೊಲೆಸ್ಟ್ರಾಲ್ ಅನ್ನು ಹತೋಟಿಯಲ್ಲಿಡುವಲ್ಲಿ ಯೋಗ ಸಹಕರಿಸುತ್ತದೆ. ಅಲ್ಲದೆ ಯೋಗ ಮಾಡಿದವನು ಕ್ರೀಯಾಶೀಲನಾಗುತ್ತಾನೆ ಎಂಬ ಮಾತಿದೆ. ಹೀಗಾಗಿ ಇಂದು ಕನ್ನಡ ಅಡ್ವೈಜರ್ ಯೋಗ ಮಾಡುವುದರಿಂದ ಆಗುವ ಪ್ರಯೋಜನಗಳ ಕುರಿತು ನಿಮಗೆ ಮಾಹಿತಿ ನೀಡಲಿದೆ.

ಯೋಗ ಮಾಡುವುದರಿಂದ ಆಗುವ ಪ್ರಯೋಜನಗಳು:

  1. ದೇಹವನ್ನು ಆರೋಗ್ಯವಾಗಿಟ್ಟುಕೊಳ್ಳಲು ಯೋಗ ಉತ್ತಮ ಉಪಾಯ. ಯೋಗಮಾಡುವುದರಿಂದ ನಿಮ್ಮ ಮನಸ್ಸು ಮತ್ತು ದೇಹ ಎರಡನ್ನೂ ಆರೋಗ್ಯವಾಗಿ ಇಟ್ಟುಕೊಳ್ಳಬಹುದು.

2. ಪ್ರತಿದಿನ ಯೋಗ ಮಾಡುವುದರಿಂದ ಒತ್ತಡ ಕಡಿಮೆ ಮಾಡಿಕೊಳ್ಳಬಹುದು, ಜೊತೆಗೆ ಆಂತರಿಕವಾಗಿ ಒಳ್ಳೆಯ ರಕ್ತ ಸಂಚಲನವಾಗುತ್ತದೆ. ಜೀರ್ಣಕ್ರಿಯೆ ಸುಲಭವಾಗುತ್ತದೆ, ಉಸಿರಾಟ ಮತ್ತು ನರಗಳ ನಿಯಂತ್ರಣವನ್ನು ಹತೋಟಿಯಲ್ಲಿಡುತ್ತದೆ. ಅಷ್ಟೇ ಅಲ್ಲದೆ ಗರ್ಭಾವಸ್ಥೆಯಲ್ಲಿ ಕಂಡುಬರುವ ನಿದ್ರಾಹೀನತೆ, ಬೆನ್ನು ನೋವು, ಅಜೀರ್ಣ ಕ್ರಿಯೆ, ಕಾಲು ಊದಿಕೊಳ್ಳುವುದನ್ನು ತಡೆಯುತ್ತದೆ. ಆದರೂ ತೊಡಕುಗಳನ್ನು ತಡೆಯಲು ಯೋಗ ಮಾಡುವ ಮೊದಲು ನಿಮ್ಮ ವೈದ್ಯರನ್ನೊಮ್ಮೆ ಕೇಳಿ ಸಲಹೆ ಪಡೆಯುವುದು ಒಳಿತು

3.ಯೋಗ ಹೊಟ್ಟೆಯನ್ನು ಫ್ಲಾಟ್ ಆಗಿಸುವಲ್ಲಿ ಹೇಗೆ ಸಹಕರಿಸುತ್ತದೆ ಎಂಬುದನ್ನು ತಿಳಿಯುವ ಮೊದಲು ಬೇರೆ ಯಾವುದೇ ವ್ಯಾಯಾಮವು ಹೊಟ್ಟೆಯನ್ನು ಫ್ಲಾಟ್ ಅಗಿಸುವಲ್ಲಿ ಯಶಸ್ವಿಯಾಗಲಾರದೆಂಬುದನ್ನು ತಿಳಿಯಲೇ ಬೇಕು. ನಿಮಗೆ ಯಾರಾದರೂ ಕೆಲಸ, ಲೋ ಟೆಂಪೋ, ಮತ್ತು ವ್ಯಾಯಾಮಗಳಿಂದ ಹೊಟ್ಟೆಯನ್ನು ಫ್ಲಾಟ್ ಮಾಡಬಹುದು ಎಂದಲ್ಲಿ ನೀವು ಬೇರೆ ನುರಿತ ಸಲಹೆಗಾರರನ್ನು ಭೇಟಿ ಮಾಡುವುದು ಒಳಿತು.

4. ಸ್ವಲ್ಪ ಕಾಲ ಉಸಿರನ್ನು ಬಿಗಿ ಹಿಡಿದು ಮಾಡುವ ಮತ್ತು ಇನ್ನಿತರ ಆಸನಗಳು ಹೃದಯ ಮತ್ತು ಅಪದಮನಿಯ ಆರೋಗ್ಯವನ್ನು ಕಾಪಾಡುತ್ತವೆ. ಯೋಗ ರಕ್ತಸಂಚಲನವನ್ನು ಸರಾಗವಾಗಿಸುವುದರಿಂದ ರಕ್ತ ಹೆಪ್ಪುಗಟ್ಟುವಿಕೆಯಂತಹ ಕ್ರಿಯೆಯಿಂದ ರಕ್ಷಿಸಿ ಹೃದಯವನ್ನು ಆರೋಗ್ಯಯುತವಾಗಿರಿಸಿತ್ತದೆ

5.ಯೋಗದಲ್ಲಿ ಬರುವ ಧೀರ್ಘ ಉಸಿರಾಟ ಮತ್ತು ನಿಧಾನ ಉಸಿರಾಟದ ಆಸನಗಳಿಂದ ಶ್ವಾಸಕೋಶ ಮತ್ತು ಹೊಟ್ಟೆಯ ಸಾಮರ್ಥ್ಯವನ್ನು ಹೆಚ್ಚಿಸಬಹುದು. ಇದು ದೈನಂದಿನ ಕಾರ್ಯನಿರ್ವಹಣೆ ಸಾಮರ್ಥ್ಯ ಮತ್ತು ಸಹಿಷ್ಣುತೆಯನ್ನು ಹೆಚ್ಚಿಸುವಲ್ಲಿ ಸಹಕರಿಸುತ್ತದೆ. ಧೀರ್ಘ ಉಸಿರಾಟದ ಯೋಗವು ವಿಶ್ರಾಂತಿಯನ್ನು ನೀಡಿ ಮನಸ್ಸಿನ ಮತ್ತು ದೇಹದ ಒತ್ತಡವನ್ನು ಕಡಿಮೆ ಮಾಡುತ್ತದೆ.

6.ದಿನನಿತ್ಯದ ಜಂಜಾಟದಲ್ಲಿ ಕುಳಿತುಕೊಳ್ಳುವ ಬೇರೆಬೇರೆ ಭಂಗಿಯಿಂದಾಗಿ ವಯಸ್ಸಾಗುತ್ತಿದ್ದಂತೆ ನಾವು ನಮ್ಮ ಸಮತೋಲನವನ್ನು ಕಳೆದುಕೊಳ್ಳುತ್ತೇವೆ.ಈ ಕಾರಣದಿಂದಾಗಿ ಬೆನ್ನು ನೋವು, ಮೂಳೆಯ ಒಡೆತ, ಸೆಳೆತ ಇವುಗಳೆಲ್ಲ ಕಾಣಿಸಿಕೊಳ್ಳುತ್ತವೆ. ಯೋಗ ಮಾಡುವುದರಿಂದ ಈ ನೋವನ್ನು ನಿವಾರಿಸಿ ಸಮತೋಲನವನ್ನು ಕಾಪಾಡಿಕೊಂಡು ಹಿಡಿತದಲ್ಲಿರಬಹುದು. ಯೋಗದ ಮೂಲಕ ನೀವು ನಿಮ್ಮ ಬಲವನ್ನು ಮತ್ತೆ ಪಡೆದುಕೊಳ್ಳಬಹುದು. ಇದು ನಿಮ್ಮ ಮೆದುಳನ್ನು ಚುರುಕಾಗಿಸುವುದಲ್ಲೂ ಕೂಡ ಸಹಕರಿಸುತ್ತದೆ.

7. ಯೋಗ ಒತ್ತಡವನ್ನು ಕಡಿಮೆ ಮಾಡುತ್ತದೆ. ವಿರಾಮವಿಲ್ಲದ ಕೆಲಸದ ನಂತರ ನೀವು ಯೋಗ ಮಾಡಿದರೆ ಒತ್ತಡ ಕಡಿಮೆಯಾಗುವುದನ್ನು ಕಾಣಬಹುದು. ಅಂದಮಾತ್ರಕ್ಕೆ ಯೋಗ ಒಂದೇ ಒತ್ತಡವನ್ನು ನಿವಾರಿಸಲು ಇರುವ ಮಾರ್ಗ ಎಂದಲ್ಲ. ಯಾವುದೇ ರೀತಿಯ ವ್ಯಾಯಾಮವನ್ನು ಮನಸ್ಸಿಟ್ಟು ಶೃದ್ಧೆಯಿಂದ ಸರಿಯಾಗಿ ಮಾಡಿದರೆ ಅದರಿಂದ ಒತ್ತಡವನ್ನು ನಿವಾರಿಸಿಕೊಳ್ಳಬಹುದು.

8. ಯೋಗವು ನಿಮಗೆ ಸಂತೋಷವನ್ನು ಒದಗಿಸುತ್ತದೆ. ಯೋಗವು ನಮ್ಮ ಆಸೆಗಳು ಮತ್ತು ಮನಸ್ಸಿನ ಮೇಲೆ ನಿಯಂತ್ರಣವನ್ನು ಹೊಂದಲು ಸಹಾಯ ಮಾಡುತ್ತದೆ. ಮಾನಸಿಕ ನೆಮ್ಮದಿಯು ಯೋಗ ಮಾಡುವವರಿಗೆ ಸುಲಭವಾಗಿ ದೊರೆಯುತ್ತದೆ. ಯೋಗವು ಹಿತ-ಮಿತ ಜೀವನ ಸಿದ್ಧಾಂತವನ್ನು ಪ್ರತಿಪಾದಿಸುತ್ತದೆ. ಹೀಗಾಗಿ ಯೋಗವು ಸಂತೋಷವನ್ನು ಒದಗಿಸುತ್ತದೆ.

9. ಯೋಗಾಸನವು ಅಧಿಕ ಕ್ಯಾಲೋರಿಗಳನ್ನು ವ್ಯಯಿಸುತ್ತದೆ, ಇದರಿಂದಾಗಿ ತೂಕ ಕಡಿಮೆ ಮಾಡಿಕೊಳ್ಳಲು ಸಹಾಯವಾಗುತ್ತದೆ. ಯೋಗಾಸನವು ನರವ್ಯೂಹಗಳನ್ನು ಉಪಶಮನಗೊಳಿಸುತ್ತದೆ.

10. ಯೋಗಾಭ್ಯಾಸದಲ್ಲಿ ಬರುವ ಉಸಿರಾಟ ಮತ್ತು ಸಮತೋಲನ ಆಸನಗಳು ಮೆದುಳಿನ ಎರಡು ಕಡೆಗಳಲ್ಲೂ ಸಮತೋಲನ ಕಾಪಾಡುತ್ತದೆ. ನೋವುಗಳನ್ನುತಡೆಯುತ್ತದೆ – ಯೋಗ ಮಾಡುವುದರಿಂದ ಬಲಯುತವಾಗುವುದರ ಜೊತೆಗೆ ಬೆನ್ನುನೋವು, ಕೀಳುನೋವು ಅಥವಾ ಯಾವುದೇ ನೋವಿದ್ದರೂ ಅದನ್ನು ಶಮನಗೊಳಿಸುತ್ತದೆ.

Yoga is one of the oldest exercises of India. That has more than 3000 years history. “Yoga is the best gift of Indian culture to the world. Besides yoga exercises, it helps you find the meaning of unity with the world and nature. Yoga helps to reducing blood pressure, weight loss, reducing stress, diabetes, mental retardation, and controlling cholesterol.

You may also like