Home » ಹೈದ್ರಾಬಾದ್ ಕರ್ನಾಟಕ ಸ್ಥಳೀಯ ವೃಂದದಡಿ ತೋಟಗಾರರ ನೇಮಕ: ಅರ್ಜಿ ಆಹ್ವಾನ

ಹೈದ್ರಾಬಾದ್ ಕರ್ನಾಟಕ ಸ್ಥಳೀಯ ವೃಂದದಡಿ ತೋಟಗಾರರ ನೇಮಕ: ಅರ್ಜಿ ಆಹ್ವಾನ

by manager manager
Horticulture Department Gardener recruitment 2019 in Hyderabad Karnataka 1

ಕರ್ನಾಟಕ ಸರ್ಕಾರ ತೋಟಗಾರಿಕೆ ಇಲಾಖೆಯಲ್ಲಿನ ಹೈದ್ರಾಬಾದ್ ಕರ್ನಾಟಕ ಸ್ಥಳೀಯ ವೃಂದ ಮತ್ತು ಹೈದ್ರಾಬಾದ್ ಕರ್ನಾಟಕ ರಾಜ್ಯ ಮಟ್ಟದ ಸ್ಥಳೀಯ ವೃಂದದಡಿ ತೋಟಗಾರರ ಹುದ್ದೆಗಳನ್ನು(horticulture department karnataka jobs 2019 in Hyderabad Karnataka) ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಕಂಪ್ಲೀಟ್ ಡೀಟೇಲ್ಸ್ ಈ ಕೆಳಗಿನಂತಿದೆ.(totagarike karnataka recruitment 2019-HK)

ಹುದ್ದೆಯ ಹೆಸರು : ತೋಟಗಾರರು

ಒಟ್ಟು ಹುದ್ದೆಗಳ ಸಂಖ್ಯೆ : 128

ವೇತನ ಶ್ರೇಣಿ: 17000-400-18600-450-20400-500-22400-550-24600-600-27000-650-28950

ಅರ್ಜಿಗಳನ್ನು ಸಲ್ಲಿಸಲು ಆರಂಭಿಕ ದಿನಾಂಕ: 04-02-2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-03-2019

ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 06-03-2019

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ 300

ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ.150

ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ.50

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : ಶುಲ್ಕ ವಿನಾಯಿತಿ ನೀಡಲಾಗಿದೆ

ಸೂಚನೆ: ಅಭ್ಯರ್ಥಿಯು ಶುಲ್ಕ ಪಾವತಿಸಿದ ವಿವರಗಳನ್ನು ನಿಗಧಿತ ಸಮಯದೊಳಗೆ ಆನ್‌ಲೈನ್‌ ಅರ್ಜಿಯಲ್ಲಿ ನಮೂದಿಸತಕ್ಕದ್ದು.

ಅರ್ಜಿ ಶುಲ್ಕ ಪಾವತಿಸುವ ವಿಧಾನ: ಸದರಿ ಹುದ್ದೆಗೆ ನಿಗಧಿಪಡಿಸಿರುವ ಶುಲ್ಕಕ್ಕೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಚಲನ್ ಪ್ರತಿಯನ್ನು ಆನ್‌ಲೈನ್‌ ಮೂಲಕ ಪಡೆದು ಅಂಚೆ ಕಛೇರಿಯ ಕೆಲಸದ ವೇಳೆಯೊಳಗೆ ಕರ್ನಾಟಕದ ಯಾವುದೇ ಎಲೆಕ್ಟ್ರಾನಿಕ್ ಅಂಚೆ ಕಛೇರಿಯಲ್ಲಿ ಪಾವತಿ ಮಾಡಬೇಕು.

ಶೈಕ್ಷಣಿಕ ವಿದ್ಯಾರ್ಹತೆ: ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಈ ಕೆಳಕಂಡ ವಿದ್ಯಾರ್ಹತೆಯನ್ನು ಹೊಂದಿರಲೇಬೇಕು.

– SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು

– ತೋಟಗಾರಿಕೆ ಇಲಾಖೆಯಿಂದ ನಡೆಸಲಾಗುವ 10 ತಿಂಗಳ ತೋಟಗಾರಿಕೆ ತರಬೇತಿಯನ್ನು ಪಡೆದಿರಬೇಕು.

ವಯೋಮಿತಿ

ಅರ್ಜಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 18 ವರ್ಷ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/: 40 ವರ್ಷ

ಪ್ರವರ್ಗ 2ಎ/ಬಿ/3ಎ/3ಬಿ : 38 ವರ್ಷ

ಸಾಮಾನ್ಯ ವರ್ಗ ಗರಿಷ್ಠ : 35 ವರ್ಷ

ಮಾಜಿ ಸೈನಿಕ ಅಭ್ಯರ್ಥಿಗಳು : ಗರಿಷ್ಠ ವಯೋಮಿತಿಯಲ್ಲಿಅವರುಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ವರ್ಷಗಳು ಜೊತೆಗೆ 03 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ.

ಮೀಸಲಾತಿವಾರು ಹುದ್ದೆಗಳ ವರ್ಗೀಕರಣ ಈ ಕೆಳಗಿನಂತಿದೆ

Horticulture Department Gardener recruitment 2019 in Hyderabad Karnataka

ನೇಮಕಾತಿ ವಿಧಾನ ಹೇಗೆ?

ಕರ್ನಾಟಕ ನಾಗರೀಕ ಸೇವೆಗಳು( ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಹಾಗೂ ಆಯ್ಕೆ ) (ಸಾಮಾನ್ಯ) (6ನೇ ತಿದ್ದುಪಡಿ) ನಿಯಮಗಳು, 2015 ರಂತೆ ಗ್ರೂಪ್ ‘ಡಿ’ ಹುದ್ದೆಗೆ ಇಲಾಖಾ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ ಅನ್ವಯ ಅಭ್ಯರ್ಥಿಯು SSLC ಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಶೇ.50 ಮತ್ತು ತೋಟಗಾರಿಕೆ ಇಲಾಖೆಯು ನಡೆಸುವ 10 ತಿಂಗಳ ತೋಟಗಾರಿಕೆ ತರಬೇತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಶೇ.50 ರಷ್ಟನ್ನು ಪರಿಗಣಿಸಿ ಶೇಕಡವಾರು ಅಂಕಗಳ ಜೇಷ್ಠತೆಯ ಮೇರೆಗೆ ತೋಟಗಾರ ಹುದ್ದೆಗೆ ಅರ್ಹ ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿಗಳನ್ನು ಆನ್‌ಲೈನ್ ಮೂಲಕವೇ ಭರ್ತಿ ಮಾಡಿಬೇಕು. ಅರ್ಜಿ ಸಲ್ಲಿಸಲು ಈ ಕೆಳಗಿನ ದಾಖಲೆಗಳು ಅಗತ್ಯ

– ಭಾವಚಿತ್ರ ಮತ್ತು ಸಹಿ

– ವಯೋಮಿತಿಗೆ ಆಧಾರವಾಗಿ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ

– ವಿದ್ಯಾರ್ಹತೆ ದಾಖಲೆ

– ಹೈದ್ರಾಬಾದ್ ಕರ್ನಾಟಕ ಮೀಸಲಾತಿಗೆ ಸಂಬಂಧಿಸಿದ ದಾಖಲೆಗಳು ಮತ್ತು ಇತರೆ.

– ತೋಟಗಾರಿಗೆ ಇಲಾಖೆಯಲ್ಲಿನ ಹೈದ್ರಾಬಾದ್ ಕರ್ನಾಟಕ ತೋಟಗಾರರ ಹುದ್ದೆಯ ನೇಮಕಾತಿ ಅಧಿಸೂಚನೆ ಮತ್ತು ಇತರೆ ಹೆಚ್ಚಿನ ಮಾಹಿತಿಯ ಪಿಡಿಎಫ್‌ ಗಾಗಿ – ಕ್ಲಿಕ್ ಮಾಡಿ

– ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು – ಕ್ಲಿಕ್‌ ಮಾಡಿ

– http://www.horticulture.kar.nic.in/

Govt of Karnataka Horticulture Department has invited application for the post of Horticulture department Gardener jobs in Hyderabad Karnataka Cadre. Read more here..

You may also like