Home » ಕಾರಾಗೃಹ ಇಲಾಖೆಯಲ್ಲಿ ಜೈಲರ್, ವಾರ್ಡರ್ ನೇಮಕಾತಿ: ಅರ್ಜಿ ಆಹ್ವಾನ

ಕಾರಾಗೃಹ ಇಲಾಖೆಯಲ್ಲಿ ಜೈಲರ್, ವಾರ್ಡರ್ ನೇಮಕಾತಿ: ಅರ್ಜಿ ಆಹ್ವಾನ

by manager manager
jailor and warder recruitment 2019

ಕರ್ನಾಟಕ ರಾಜ್ಯ ಕಾರಗೃಹ ಇಲಾಖೆಯು ಖಾಲಿ ಇರುವ ಜೈಲರ್ ಮತ್ತು ವಾರ್ಡರ್ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಅಧಿಸೂಚನೆಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.(jailor and warder recruitment 2019)

ಹುದ್ದೆಯ ಹೆಸರು : ಜೈಲರ್

ಒಟ್ಟು ಹುದ್ದೆಗಳ ಸಂಖ್ಯೆ : 12

ಶೈಕ್ಷಣಿಕ ವಿದ್ಯಾರ್ಹತೆ: ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ

ಹುದ್ದೆಯ ಹೆಸರು : ವಾರ್ಡರ್

ಒಟ್ಟು ಹುದ್ದೆಗಳ ಸಂಖ್ಯೆ : 650

ಶೈಕ್ಷಣಿಕ ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ

ಜೈಲರ್ ಮತ್ತು ವಾರ್ಡರ್ ಹುದ್ದೆಗಳಿಗೆ ದೇಹದಾರ್ಢ್ಯತೆ ಪರೀಕ್ಷೆ

ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ಈ ಕೆಳಕಂಡಂತೆ ದೈಹಿಕ ಸಾಮರ್ಥ್ಯ ಪರೀಕ್ಷೆಯನ್ನು ನಡೆಸಲಾಗುವುದು

ಅರ್ಜಿಗಳನ್ನು ಸಲ್ಲಿಸಲು ಆರಂಭಿಕ ದಿನಾಂಕ: 21-02-2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-03-2019

ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 11-03-2019

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ 250

ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ.250

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : ರೂ.100

ಅರ್ಜಿ ಶುಲ್ಕ ಪಾವತಿಸುವ ವಿಧಾನ: ಸದರಿ ಹುದ್ದೆಗೆ ನಿಗಧಿಪಡಿಸಿರುವ ಶುಲ್ಕಕ್ಕೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಚಲನ್ ಪ್ರತಿಯನ್ನು ಆನ್‌ಲೈನ್‌ ಮೂಲಕ ಪಡೆದು ಅಂಚೆ ಕಛೇರಿಯ ಕೆಲಸದ ವೇಳೆಯೊಳಗೆ ಕರ್ನಾಟಕದ ಯಾವುದೇ ಅಂಚೆ ಕಛೇರಿಯಲ್ಲಿ ಅಥವಾ ಬ್ಯಾಂಕ್‌ನಲ್ಲಿ ಪಾವತಿ ಮಾಡಬೇಕು.

ಜೈಲರ್ ಮತ್ತು ವಾರ್ಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯೋಮಿತಿ

ಅರ್ಜಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 20 ವರ್ಷ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/: 28 ವರ್ಷ

ಪ್ರವರ್ಗ 2ಎ/ಬಿ/3ಎ/3ಬಿ : 28 ವರ್ಷ

ಸಾಮಾನ್ಯ ವರ್ಗ ಗರಿಷ್ಠ : 26 ವರ್ಷ

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿಗಳನ್ನು ಆನ್‌ಲೈನ್ ಮೂಲಕವೇ ಭರ್ತಿ ಮಾಡಬೇಕು. ಅರ್ಜಿ ಸಲ್ಲಿಸಲು ಈ ಕೆಳಗಿನ ದಾಖಲೆಗಳು ಅಗತ್ಯ

– ಭಾವಚಿತ್ರ ಮತ್ತು ಸಹಿ

– ವಯೋಮಿತಿಗೆ ಆಧಾರವಾಗಿ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ

– ವಿದ್ಯಾರ್ಹತೆ ದಾಖಲೆ

– ಮೀಸಲಾತಿಗೆ ಕೋರಿದ್ದರೆ ಸಂಬಂಧಿಸಿದ ದಾಖಲೆಗಳು ಮತ್ತು ಇತರೆ.

– ಜೈಲರ್ ಮತ್ತು ವಾರ್ಡರ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು – ಕ್ಲಿಕ್‌ ಮಾಡಿ

– ಜೈಲರ್ ಮತ್ತು ವಾರ್ಡರ್ ಹುದ್ದೆಗಳ ನೇಮಕಾತಿ ಕುರಿತು ಇತರೆ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಪಿಡಿಎಫ್‌ ನೋಡಲು – ಕ್ಲಿಕ್ ಮಾಡಿ

– www.karnatakaprisons.in ,

Karnataka Prisons Department has invited applications for the post of Jailor and Warder(Men and Women). Jailor and Warder recruitment 2019 full information is here..

(karnataka prisons department recruitment 2019)

You may also like