Home » ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

by manager manager

ಪೊಲೀಸ್ ಇಲಾಖೆಯಲ್ಲಿ ಮೀಸಲು ಪೊಲೀಸ್, ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್‌ ನಲ್ಲಿ ಕಾನ್ಸ್‌ಟೇಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌ ಆಗಲು ಅವಕಾಶ ನೀಡಲಾಗಿದೆ. ಇದಕ್ಕಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಯ ಹೆಸರು : ಸಿವಿಲ್ ಪೊಲೀಸ್‌ ಕಾನ್ಸ್‌ಟೇಬಲ್‌ (ಪುರುಷ ಮತ್ತು ಮಹಿಳಾ)
ಹುದ್ದೆಗಳ ಸಂಖ್ಯೆ : 387
ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19-08-2021
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-09-2021
ಆನ್‌ಲೈನ್‌ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ: 08-09-2021
ನೇಮಕಾತಿ ಹಂತಗಳು : ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ.

ವಯೋಮಿತಿ ಅರ್ಹತೆಗಳು
ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಆಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 31 ವರ್ಷ, ಇತರೆ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.


ವಿದ್ಯಾರ್ಹತೆ : PUC ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಸದರಿ ಹುದ್ದೆಗಳ ನೇಮಕ ಪ್ರಕ್ರಿಯೆ ವೆಬ್‌ ವಿಳಾಸ : http://cpcins21.ksponline.co.in/
ಅರ್ಜಿ ಸಲ್ಲಿಸುವ ಮುನ್ನ ರಿಜಿಸ್ಟ್ರೇಷನ್‌ಗೆ ವೆಬ್‌ ಲಿಂಕ್‌ : http://app.cpcins21.ksponline.co.in/Login.aspx