Home » ವಿವಿಧ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ವಿವಿಧ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

by manager manager

2020-21 ನೇ ಸಾಲಿನ SFC ಮತ್ತು ನಗರಸಭೆ ಅನುದಾನದಲ್ಲಿ ಕಾಯ್ದಿರಿಸಿದ ಶೇ.29 ಯೋಜನೆಗಳಡಿ ಕ್ರಮವಾಗಿ ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡದ ಬಡ ಜನರ ಕಲ್ಯಾಣ ನಿಧಿ ಕಾರ್ಯಕ್ರಮಗಳಿಗಾಗಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಒದಗಿಸಲು ಅವಕಾಶ ಕಲ್ಪಿಸಲಾಗಿದೆ. ಸದರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಬಡತನ ರೇಖೆಗಿಂತ ಕೆಳಗಿರುವ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅರ್ಹ ಫಲಾನುಭವಿಗಳು ಅರ್ಜಿ ಹಾಗೂ ದಾಖಲಾತಿಗಳನ್ನು ಜ. 16ರ ಒಳಗಾಗಿ ಸಲ್ಲಿಸಲು ಸೂಚಿಸಲಾಗಿದೆ.

ನಗರಸಭೆ ಹಾಸನ ಇಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಕೊರೊನಾ ಹಿನ್ನೆಲೆಯಲ್ಲಿ ಕೆಲವು ಶಾಲಾ-ಕಾಲೇಜುಗಳ ದಾಖಲಾತಿ ಪ್ರಕ್ರಿಯೆ ನಡೆಯುತ್ತಿದ್ದು ಹಾಗೂ ಸಂಬಂಧಪಟ್ಟ ಇಲಾಖೆಗಳಿಂದ ಅಗತ್ಯ ದಾಖಲಾತಿಗಳನ್ನು ಪಡೆದು ಅರ್ಜಿಸಲ್ಲಿಸಲು ವಿಳಂಭವಾಗುತ್ತಿರುವುದರಿಂದ ಈ ಬಗ್ಗೆ ಫಲಾನುಭವಿಗಳು ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಕೋರಿರುವುದರಿಂದ ಹಾಗೂ ನಿಗದಿತ ಅವಧಿಯೊಳಗೆ ಸಮರ್ಪಕ ಅರ್ಜಿಗಳು ಬಾರದೇ ಇರುವುದರಿಂದ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಜ.30 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಾಸನ ನಗರಸಭೆ ಪೌರಾಯುಕ್ತರನ್ನು ಸಂಪರ್ಕಿಸಬಹುದಾಗಿದೆ.