Home » ಸಾಲ ಸೌಲಭ್ಯಕ್ಕಾಗಿ  ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಸಾಲ ಸೌಲಭ್ಯಕ್ಕಾಗಿ  ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

by manager manager

ಹಾವೇರಿ:ಸೆ.12 :ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಮರಾಠ ಸಮುದಾಯದ ಆರ್ಥಿಕ ಅಭಿವೃದ್ದಿಗಾಗಿ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 21ರವರೆಗೆ ಅವಧಿ ವಿಸ್ತರಿಸಲಾಗಿದೆ.


ಮರಾಠ ಸಮುದಾಯದವರು ಜೀಜಾವು-ಜಲಭಾಗ್ಯ ಯೋಜನೆ, ಅರಿವು ಶೈಕ್ಷಣಿಕ ಸಾಲ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಬಡ್ಡಿರಹಿತ ಸಾಲ ಯೋಜನೆಯಡಿ ಸಾಲ ಸೌಲಭ್ಯಕ್ಕೆ ದಿನಾಂಕ 21-10-2022ರೊಳಗಾಗಿ ಸೇವಾಸಿಂಧು ಪೋರ್ಟ್‍ಲ್, ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ http://kvcdc.karnataka.gov.in ಅಥವಾ ಜಿಲ್ಲಾ ಕಚೇರಿ ದೂ.08375-20038, ಸಹಾಯವಾಣಿ 8867537799 ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like