Home » ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತದಲ್ಲಿ ವಿವಿಧ ಹುದ್ದೆಗಳ ನೇಮಕ

ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತದಲ್ಲಿ ವಿವಿಧ ಹುದ್ದೆಗಳ ನೇಮಕ

by manager manager

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಗಮ ಬೆಂಗಳೂರು, ಇಲ್ಲಿ ಖಾಲಿ ಇರುವ ವಿವಿಧ ವೇತನ ಶ್ರೇಣಿಯ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ: ಖುದ್ದಾಗಿ/ಅಂಚೆ/ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಾಗಿದೆ.

ಅರ್ಜಿಗಳನ್ನು ಸಲ್ಲಿಸಲು ಆರಂಭಿಕ ದಿನಾಂಕ: 15-02-2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16-03-2019

ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 18-03-2019

ಹುದ್ದೆಗಳ ವಿವರ

ಸಂಪಾದಕರು – 01

ಸಾರ್ವಜನಿಕ ಸಂಪರ್ಕಾಧಿಕಾರಿ- 01

ಉಪನ್ಯಾಸಕರು – 03

ಜಿಲ್ಲಾ ಸಹಕಾರ ಶಿಕ್ಷಕರು – 04

ಮಹಿಳಾ ಸಹಕಾರ ಶಿಕ್ಷಕರು – 01

ಶೀಘ್ರಲಿಪಿಗಾರರು – 02

ಗ್ರಂಥಾಲಯ ಸಹಾಯಕರು – 01

ವರದಿಗಾರರು – 01

ಸ್ವಾಗತಕಾರರು – 01

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ 500

ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ.500

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : ರೂ.250

ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

– ಅರ್ಜಿ ಶುಲ್ಕವನ್ನು ಇ-ಅಂಚೆ ಕಛೇರಿಯ ಕೆಲಸದ ವೇಳೆಯೊಳಗೆ ಕರ್ನಾಟಕ ರಾಜ್ಯದ ಯಾವುದೇ ಎಲೆಕ್ಟ್ರಾನಿಕ್ ಅಂಚೆ ಕಛೇರಿಗಳಲ್ಲಿ ಮಾತ್ರ ಸಂದಾಯ ಮಾಡಬೇಕಾಗಿದೆ.

ಸೂಚನೆ: ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ತಾಂತ್ರಿಕ ತೊಂದರೆ ಅಥವಾ ಸಮಸ್ಯೆ ಎದುರಾದಲ್ಲಿ ಸಹಾಯವಾಣಿ ಮೂಲಕ ಅಥವಾ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಕಛೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಅರ್ಜಿಸುವ ಕೊನೆಯ ದಿನಾಂಕದೊಳಗೆ ಕನಿಷ್ಟ 18 ವರ್ಷ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/: 40 ವರ್ಷ

ಪ್ರವರ್ಗ 2ಎ/ಬಿ/3ಎ/3ಬಿ : 38 ವರ್ಷ

ಸಾಮಾನ್ಯ ವರ್ಗ ಗರಿಷ್ಠ : 35

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತ ನೇಮಕಾತಿ ಕುರಿತು ಇತರೆ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಪಿಡಿಎಫ್‌ ನೋಡಲು – ಕ್ಲಿಕ್ ಮಾಡಿ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತ ದ ಅಧಿಕೃತ ವೆಬ್‌ಸೈಟ್ – www.kscoopfedltd.org

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು – ಕ್ಲಿಕ್ ಮಾಡಿ

Karnataka State Co-Operative federation limited has invited application for various post for eligible candidates.

You may also like