Home » ಪೊಲೀಸ್ ಇಲಾಖೆಯಲ್ಲಿ ನೇಮಕಾತಿ: ಅರ್ಜಿ ಸಲ್ಲಿಸಲು ಫೆ.15 ಕೊನೆ ದಿನ

ಪೊಲೀಸ್ ಇಲಾಖೆಯಲ್ಲಿ ನೇಮಕಾತಿ: ಅರ್ಜಿ ಸಲ್ಲಿಸಲು ಫೆ.15 ಕೊನೆ ದಿನ

by manager manager
Karnataka State Police ksp recruitment 2019 notification

ರಾಜ್ಯ ಪೊಲೀಸ್ ಇಲಾಖೆಯು ಗೃಹ ರಕ್ಷಕ ಮತ್ತು ಪೌರ ರಕ್ಷಣಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಿದೆ. ಈ ಬಗ್ಗೆ ಕಂಪ್ಲೀಟ್ ಡೀಟೇಲ್ಸ್ ಈ ಕೆಳಗಿನಂತಿದೆ. (karnataka state police recruitment 2019)

ಹುದ್ದೆಯ ಹೆಸರು : ಬೋಧಕ

ಹುದ್ದೆಗಳ ಸಂಖ್ಯೆ : 26

ಶೈಕ್ಷಣಿಕ ಅರ್ಹತೆ : ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

To Apply for the post of Instructor – Click Here

ಹುದ್ದೆಯ ಹೆಸರು : ಸಹಾಯಕ ಬೋಧಕ

ಹುದ್ದೆಗಳ ಸಂಖ್ಯೆ : 16

ಶೈಕ್ಷಣಿಕ ಅರ್ಹತೆ : ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

To Apply for the post of Assistant Instructor – Click Here

ಹುದ್ದೆಯ ಹೆಸರು : ಸೈನಿಕ

ಹುದ್ದೆಗಳ ಸಂಖ್ಯೆ : 18

ಶೈಕ್ಷಣಿಕ ಅರ್ಹತೆ : ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

To Apply for the post of Sainik – Click Here

ಹುದ್ದೆಯ ಹೆಸರು : ಚಾಲಕ

ಹುದ್ದೆಗಳ ಸಂಖ್ಯೆ : 5

ಶೈಕ್ಷಣಿಕ ಅರ್ಹತೆ : ಎಸ್‌ಎಸ್‌ಎಲ್‌ಸಿ ಪಾತ್ ಜೊತೆಗೆ ಚಾಲ್ತಿಯಲ್ಲಿರುವ ಭಾರೀ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.

To Apply for the post of Driver – Click Here

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15/02/2019

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 18/02/2019

ವಯೋಮಿತಿ

ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲುಉ ಕನಿಷ್ಠ 21 ವರ್ಷ ಮತ್ತು ಗರಿಷ್ಠ 26 ವರ್ಷ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ : ರೂ 250

ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ.250

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ : ರೂ.100

ನೇಮಕ ಹೇಗೆ?

ಮೊದಲಿಗೆ ದೇಹದಾರ್ಡ್ಯತೆ ಪರೀಕ್ಷೆ ನಡೆಸಿ ಈ ಹಂತದಲ್ಲಿಯೇ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ. ನಂತರ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಿದ ಮೇಲೆ ಲಿಖಿತ ಪರೀಕ್ಷೆ ನಡೆಸಿ 1:3 ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಮೌಖಿಕ ಪರೀಕ್ಷೆಗೆ ಆಹ್ವಾನಿಸಲಾಗುತ್ತದೆ.

– ಚಾಲಕ ಹುದ್ದೆಗೆ ಭಾರೀ ವಾಹನ ಚಾಲನಾ ಪರವಾನಗಿ ಇರುವವರಿಗೆ ಅವರು ಪಡೆದ ಎಸ್‌ಎಸ್‌ಎಲ್‌ಸಿ ಅಂಕಗಳ ಮೇಲೆ ನೇಮಕಾತಿ ನಡೆಸಲಾಗುತ್ತದೆ.

ಈ ನೇಮಕಾತಿ ಕುರಿತು ಇನ್ನೂ ಹೆಚ್ಚಿನ ಮಾಹಿತಿ ತಿಳಿಯಲು – ಕ್ಲಿಕ್ ಮಾಡಿ

Department of Karnataka State Police has been invited application for the various post. Eligible candidates can apply online.

You may also like