ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಆಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ವಿಳಾಸ : https://ksp-recruitment.in
ಉಳಿಕೆ ಮೂಲ ವೃಂದದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳು: 3064
ಕಲ್ಯಾಣ ಕರ್ನಾಟಕ ವೃಂದದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳು: 420
ಒಟ್ಟು ಹುದ್ದೆಗಳ ಸಂಖ್ಯೆ: 3484
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 19-09-2022 ರ ಬೆಳಿಗ್ಗೆ 10-00 ಗಂಟೆಯಿಂದ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31-10-2022 ರ ಸಂಜೆ 06 ಗಂಟೆವರೆಗೆ.
ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ: 03-11-2022
ಸಾಮಾನ್ಯ ಅರ್ಹತೆ, ಇತರೆ ಹಿಂದುಳಿದ ವರ್ಗಗಳಿಗೆ ಅರ್ಜಿ ಶುಲ್ಕ ರೂ.400.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.200.
ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆ ದಿನಾಂಕ 31-10-2022 ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ.
ಇತರೆ ಅಭ್ಯರ್ಥಿಗಳಿಗೆ ಗರಿಷ್ಠ 25 ವರ್ಷ.
ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ.
ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ.
ವೇತನ ಶ್ರೇಣಿ: ರೂ.23,500 – 47,650.