Home » ಪದವಿ, ವೃತ್ತಿಪರ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಣೆ

ಪದವಿ, ವೃತ್ತಿಪರ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಣೆ

by manager manager

ಕಳೆದ 2021-22ನೇಯ ಸಾಲಿನಲ್ಲಿ ಪ್ರವೇಶಾತಿ ಪಡೆದ ಅಂತಿಮ ವರ್ಷದ ಪದವಿ, ಡಿಪ್ಲೊಮ, ಸ್ನಾತಕೋತ್ತರ, ಕಾನೂನು ಇತರೆ ಎಲ್ಲ ಕಾಲೇಜುಗಳ ವಿದ್ಯಾರ್ಥಿಗಳ ಪರೀಕ್ಷೆಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಈ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲಾಗಿದೆ.

ಅಂತಿಮ ಸೆಮಿಸ್ಟರ್, ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಇತರೆ ಎಲ್ಲ ವರ್ಗದ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ, 2022-23ನೇ ಸಾಲಿನ ಹೊಸ ಪಾಸುಗಳನ್ನು ಸೆಪ್ಟೆಂಬರ್-2022ರೊಳಗಾಗಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗ ಪಡದುಕೊಳ್ಳಬೇಕೆಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ, ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

You may also like