Home » ಮೈಸೂರು ಆಡಳಿತ ತರಬೇತಿ ಸಂಸ್ಥೆಯಲ್ಲಿ 09 ಹುದ್ದೆಗಳ ನೇಮಕ: ಅರ್ಜಿ ಆಹ್ವಾನ

ಮೈಸೂರು ಆಡಳಿತ ತರಬೇತಿ ಸಂಸ್ಥೆಯಲ್ಲಿ 09 ಹುದ್ದೆಗಳ ನೇಮಕ: ಅರ್ಜಿ ಆಹ್ವಾನ

by manager manager
mysore administrative training institute recruitment 2019

ಮೈಸೂರಿನಲ್ಲಿನ ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರದಲ್ಲಿ ಖಾಲಿ ಇರುವ ಕೆಳಕಂಡ ಪ್ರಮುಖ ಹುದ್ದೆಗಳನ್ನು ಭರ್ತಿ ಮಾಡಲು ಸಂಸ್ಥೆಯು ಅಧಿಸೂಚನೆ ಹೊರಡಿಸಲಾಗಿದೆ.

ಹುದ್ದೆಯ ಹೆಸರು ಮತ್ತು ಹುದ್ದೆಯ ಸಂಖ್ಯೆ ಕುರಿತ ಮಾಹಿತಿ ಈ ಕೆಳಗಿನಂತಿದೆ.

ಬೋಧಕರು – 02

ಕಮ್ಯೂನಿಕೇಷನ್(ಐ.ಟಿ. ಅಧಿಕಾರಿ) – 01

ರಿಸರ್ಚ್ (ಟ್ರೈನಿಂಗ್ ಅಸೋಸಿಯೇಟ್ಸ್) – 02

ಸಿಸ್ಟಂ ಆಫೀಸರ್ಸ್‌ – 02

ಅಸಿಸ್ಟೆಂಟ್ಸ್ – 02

ಒಟ್ಟು – 09

– ಈ ಮೇಲ್ಕಂಡ ಹುದ್ದೆಗಳಿಗೆ ಶೈಕ್ಷಣಿಕ ಅರ್ಹೆ ಬಗ್ಗೆ ಆಡಳಿತ ತರಬೇತಿ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ atimysore.gov.in ನಲ್ಲಿ ಲಭ್ಯವಿದೆ.

– ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ – 07-01-2019

– ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21-01-2019

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಅಧಿಸೂಚನೆಯಲ್ಲಿ ನಿಗದಿತ ನಮೂನೆಯನ್ನು ಪ್ರಿಂಟ್ ತೆಗೆದುಕೊಂಡು ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ಅಂಚೆಯ ಮೂಲಕ ಅಥವಾ ಸಾಫ್ಟ್‌ ಕಾಪಿಯನ್ನು ಇಮೇಲ್ (atimysurujobs@gmail.com) ವಿಳಾಸಕ್ಕೆ ಕಳುಹಿಸಬಹುದು.

– ಅಂಚೆ ವಿಳಾಸ – ಮಹಾ ನಿರ್ದೇಶಕರು, ಆಡಳಿತ ತರಬೇತಿ ಸಂಸ್ಥೆ, ಮೈಸೂರು.

– ಅಭ್ಯರ್ಥಿಗಳು ಸಂದರ್ಶನಕ್ಕೆ ತಮ್ಮ ಸ್ವಂತ ಖರ್ಚಿನಲ್ಲೇ ಹಾಜರಾಗಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಸೂಚನೆ: ಈ ಹುದ್ದೆಗಳನ್ನು ಗುತ್ತಿಗೆ/ನಿಯೋಜನೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ.

Mysuru administrative training institute has invited application for various post on the basis of contract. Interested candidates can apply for this post.

You may also like