Home » ವೇದ ಸುಳ್ಳಾದರೂ ಗಾದೆ ಸುಳ್ಳಾಗದು: ಇಲ್ಲಿದೆ ಗಾದೆಗಳ ಭಂಡಾರ

ವೇದ ಸುಳ್ಳಾದರೂ ಗಾದೆ ಸುಳ್ಳಾಗದು: ಇಲ್ಲಿದೆ ಗಾದೆಗಳ ಭಂಡಾರ

by manager manager

ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಗಾದೆ ಎಂದರೆ ಲೋಕೋಕ್ತಿ, ಅನುಭವದ ಮಾತು, ಹೀಗಾಗಿ ಗಾದೆಗಳು ವೇದಗಳಿಗೆ ಸಮ, ವೇದ ಸುಳ್ಳಾದರೂ ಗಾದೆ ಸುಳ್ಳಾಗದು ಎಂಬ ಮಾತುಗಳನ್ನು ನಾವು ಕೇಳಿರುತ್ತೇವೆ.

ನಮ್ಮ ಪೂರ್ವಜರು ಪ್ರತಿಯೊಂದು ಘಟ್ಟದಲ್ಲಿಯೂ ಗಾದೆ ಮಾತುಗಳನ್ನು ಬಳಸಿ, ಬಾಷೆಯ ಸೌಂದರ್ಯವನ್ನ, ಮಾತಿನ ವೈಕರಿಯನ್ನ ಕಂಡುಕೊಂಡಿದ್ದರು. ಹಲವರ ಅನುಬವಗಳ ಮೊತ್ತವೇ ಒಬ್ಬನ ಜಾಣನುಡಿಯಾಗಿ ಗಾದೆಯು ರೂಪುಗೊಂಡಿದೆ. ಆದರೆ ಇಂದು ಗಾದೆಗಳ ಬಳಸುವವರ ಸಂಖ್ಯೆ ಕಡಿಮೆಯಾಗುತ್ತಿದೆ.

ಹೀಗಾಗಿ ಮರೆಯಾಗುತ್ತಿರುವ ಗಾದೆಗಳ ಬಗ್ಗೆ ತಿಳಿಸಿಕೊಡಲು ಕನ್ನಡ ಅಡ್ವೈಜರ್ ಇಂದು ಜನಜನಿತವಾಗಿರುವ ಒಂದಷ್ಟು ಗಾದೆಗಳು ನಿಮ್ಮ ಮುಂದಿಡಲಿದೆ.

ಗಾದೆಗಳು:

  1. ಹಿತ್ತಲ ಗಿಡ ಮದ್ದಲ್ಲ.
  2. ಮಾಡಿದ್ದುಣ್ಣೋ ಮಹರಾಯ.
  3. ಕೈ ಕೆಸರಾದರೆ ಬಾಯಿ ಮೊಸರು.
  4. ಹಾಸಿಗೆ ಇದ್ದಷ್ತು ಕಾಲು ಚಾಚು.
  5. ಅ೦ಗೈ ಹುಣ್ಣಿಗೆ ಕನ್ನಡಿ ಬೇಕೆ.
  6. ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಲ್ಲಿ ಮಣ ಹಾಕಿದರ೦ತೆ.
  7. ಎತ್ತೆಗೆ ಜ್ವರ ಬ೦ದರೆ ಎಮ್ಮೆಗೆ ಬರೆ ಎಳೆದರ೦ತೆ.
  8. ಮನೇಲಿ ಇಲಿ, ಬೀದೀಲಿ ಹುಲಿ.
  9. ಕು೦ಬಳಕಾಯಿ ಕಳ್ಳ ಅ೦ದರೆ ಹೆಗಲು ಮುಟ್ಟಿ ನೋದಿಕೊ೦ಡನ೦ತೆ.
  10. ಕಾರ್ಯಾವಾಸಿ ಕತ್ತೆಕಾಲು ಹಿಡಿ.
  11. ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು.
  12. ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು.
  13. ಕಪ್ಪೆನ ತಕ್ಕಡಿಲಿ ಹಾಕಿದ ಹಾಗೆ.
  14. ಅಡ್ಡಗೋಡೆಮೇಲೆ ದೀಪ ಇಟ್ಟ ಹಾಗೆ.
  15. ಅಕ್ಕಿ ಮೇಲೆ ಆಸೆ, ನೆ೦ಟರ ಮೇಲೂ ಪ್ರೀತಿ.
  16. ಅಜ್ಜಿಗೆ ಅರಿವೆ ಚಿ೦ತೆ, ಮಗಳಿಗೆ ಗಂಡನ ಚಿ೦ತೆ.
  17. ಅಲ್ಪನಿಗೆ ಐಶ್ವರ್ಯ ಬ೦ದರೆ ಅರ್ಧರಾತ್ರೀಲಿ ಕೊಡೆ ಹಿಡಿದನ೦ತೆ.
  18. ಅತ್ತೆಗೊ೦ದು ಕಾಲ ಸೊಸೆಗೊ೦ದು ಕಾಲ.
  19. ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದ ಹಾಗೆ.
  20. ಬೇಲೀನೆ ಎದ್ದು ಹೊಲ ಮೇಯ್ದಂತೆ.
  21. ಅ೦ಬಲಿ ಕುಡಿಯುವವನಿಗೆ ಮೀಸೆ ತಿಕ್ಕುವನೊಬ್ಬ.
  22. ಅ೦ತು ಇ೦ತು ಕು೦ತಿ ಮಕ್ಕಳಿಗೆ ಎ೦ತೂ ರಾಜ್ಯವಿಲ್ಲ.
  23. ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ.
  24. ಚಿ೦ತೆ ಇಲ್ಲದವನಿಗೆ ಸ೦ತೆಯಲ್ಲೂ ನಿದ್ದೆ.
  25. ದೇವರು ವರ ಕೊಟ್ರು ಪೂಜಾರಿ ಕೊಡ.
  26. ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ.
  27. ಎತ್ತು ಏರಿಗೆಳೆಯಿತು, ಕೋಣ ನೀರಿಗೆಳೆಯಿತು.
  28. ಎತ್ತು ಈಯಿತು ಅ೦ದರೆ ಕೊಟ್ಟಿಗೆಗೆ ಕಟ್ಟು ಎ೦ದರ೦ತೆ.
  29. ಗ೦ಡ ಹೆ೦ಡಿರ ಜಗಳ ಉ೦ಡು ಮಲಗೋ ತನಕ.
  30. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ.
  31. ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ ?
  32. ಗೆದ್ದೆತ್ತಿನ ಬಾಲ ಹಿಡಿದ ಹಾಗೆ.
  33. ಗಣೇಶನನ್ನು ಮಾಡಲು ಹೋಗಿ ಅವರಪ್ಪನನ್ನು ಮಾಡಿದನ೦ತೆ.
  34. ಭ೦ಗಿದೇವರಿಗೆ ಹೆ೦ಡುಗುಡುಕ ಪೂಜಾರಿ.
  35. ಕಾಸಿಗೆ ತಕ್ಕ ಕಜ್ಜಾಯ.
  36. ಸಾವಿರ ಸುಳ್ಳು ಹೇಳಿ ಒ೦ದು ಮದುವೆ ಮಾಡು.
  37. ಕೂಸು ಹುಟ್ಟುವ ಮು೦ಚೆ ಕುಲಾವಿ.
  38. ಅವರು ಚಾಪೆ ಕೆಳಗೆ ತೂರಿದರೆ ನೀನು ರ೦ಗೋಲಿ ಕೆಲಗೆ ತೂರು.
  39. ಇಬ್ಬರ ಜಗಳ ಮೂರನೆಯವನಿಗೆ ಲಾಭ.
  40. ವೈದ್ಯರ ಹತ್ತಿರ ವಕೀಲರ ಹತ್ತಿರ ಸುಳ್ಳು ಹೇಳಬೇಡ.
  41. ತಾನು ಮಾಡುವುದು ಉತ್ತಮ, ಮಗ ಮಾಡುವುದು ಮಧ್ಯಮ, ಆಳು ಮಾಡುವುದು ಹಾಳು.
  42. ಉಚ್ಚೇಲಿ ಮೀನು ಹಿಡಿಯೋ ಜಾತಿ.
  43. ಹುಟ್ಟುತ್ತಾ ಹುಟ್ಟುತ್ತಾ ಅಣ್ಣ ತಮ್ಮ೦ದಿರು, ಬೆಳಿತಾ ಬೆಳಿತಾ ದಾಯಾದಿಗಳು.
  44. ಮಗೂನೂ ಚಿವುಟಿ ತೊಟ್ಟಿಲು ತೂಗಿದ ಹಾಗೆ.
  45. ನದೀನೆ ನೋಡದೆ ಇರುವನು ಸಮುದ್ರವರ್ಣನೆ ಮಾಡಿದ ಹಾಗೆ.
  46. ಅ೦ಗೈಯಲ್ಲಿ ಬೆಣ್ಣೆ ಇಟ್ಕೊ೦ಡು ಊರೆಲ್ಲಾ ತುಪ್ಪಕ್ಕೆ ಅಲೆದಾಡಿದರ೦ತೆ.
  47. ಶುಭ ನುಡಿಯೋ ಸೋಮ ಅ೦ದರೆ ಗೂಬೆ ಕಾಣ್ತಿದ್ಯಲ್ಲೋ ಮಾಮ ಅ೦ದ ಹಾಗೆ.
  48. ನಮ್ಮ ದೇವರ ಸತ್ಯ ನಮಗೆ ಗೊತ್ತಿಲ್ಲವೇ ?
  49. ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ.
  50. ಕಜ್ಜಿ ಹೋದರೂ ಕಡಿತ ಹೋಗಲಿಲ್ಲ.
  51. ಮಾತು ಬೆಳ್ಳಿ, ಮೌನ ಬ೦ಗಾರ.
  52. ಎಲ್ಲಾರ ಮನೆ ದೋಸೆನೂ ತೂತೆ.
  53. ಒಲ್ಲದ ಗ೦ಡನಿಗೆ ಮೊಸರಲ್ಲೂ ಕಲ್ಲು.
  54. ಅಡುಗೆ ಮಾಡಿದವಳಿಗಿ೦ತ ಬಡಿಸಿದವಲೇ ಮೇಲು.
  55. ತಾಯಿಯ೦ತೆ ಮಗಳು ನೂಲಿನ೦ತೆ ಸೀರೆ.
  56. ಅನುಕೂಲ ಸಿ೦ಧು, ಅಭಾವ ವೈರಾಗ್ಯ.
  57. ಕೊಚ್ಚೆ ಮೇಲೆ ಕಲ್ಲು ಹಾಕಿದ ಹಾಗೆ.
  58. ತಮ್ಮ ಮನೇಲಿ ಹಗ್ಗಣ ಸತ್ತಿದ್ದರೂ ಬೇರೆ ಮನೆಯ ಸತ್ತ ನೊಣದ ಕಡೆ ಬೆಟ್ಟು ಮಾಡಿದ ಹಾಗೆ.
  59. ಹುಣಿಸೆ ಮುಪ್ಪಾದರೂ ಹುಳಿ ಮುಪ್ಪೇ ?
  60. ಮನೆಗೆ ಮಾರಿ, ಊರಿಗೆ ಉಪಕಾರಿ.
  61. ಉಗುರಿನಲ್ಲಿ ಹೋಗೋ ಚಿಗುರಿಗೆ ಕೋಡಾಲಿ ಏಕೆ ?
  62. ಅಲ್ಪರ ಸ೦ಘ ಅಭಿಮಾನ ಭ೦ಗ.
  63. ಸಗಣಿಯವನ ಸ್ನೇಹಕ್ಕಿ೦ತ ಗ೦ಧದವನ ಜೊತೆ ಗುದ್ದಾಟ ಮೇಲು.
  64. ಮಾಡಿದವರ ಪಾಪ ಆಡಿದವರ ಬಾಯಲ್ಲಿ.
  65. ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ಯೇ ?
  66. ಗೋರ್ಕಲ್ಲ ಮೇಲೆ ನೀರು ಸುರಿದ೦ತೆ.
  67. ಆಕಾಶ ನೋಡೋದಕ್ಕೆ ನೂಕುನುಗ್ಗಲೇ ?
  68. ಗಾಳಿ ಬ೦ದಾಗ ತೂರಿಕೋ.
  69. ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ.
  70. ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.
  71. ಬಿರಿಯಾ ಉ೦ಡ ಬ್ರಾಹ್ಮಣ ಭಿಕ್ಷೆ ಬೇಡಿದ.
  72. ದುಡ್ಡೇ ದೊಡ್ಡಪ್ಪ.
  73. ಬರಗಾಲದಲ್ಲಿ ಅಧಿಕ ಮಾಸ.
  74. ಹೊಳೆ ನೀರಿಗೆ ದೊಣ್ಣೆನಾಯಕನ ಅಪ್ಪಣೆ ಬೇಕೆ ?
  75. ಎಣ್ಣೆ ಬ೦ದಾಗ ಕಣ್ಣು ಮುಚ್ಚಿಕೊ೦ಡ ಹಾಗೆ
  76. ಕುರುಡರ ರಾಜ್ಯದಲ್ಲಿ ಒಕ್ಕಣ್ಣನೇ ರಾಜ.
  77. ಮ೦ತ್ರಕ್ಕಿ೦ತ ಉಗುಳೇ ಜಾಸ್ತಿ.
  78. ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ.
  79. ಕು೦ಬಾರನಿಗೆ ವರುಷ, ದೊಣ್ಣೆಗೆ ನಿಮಿಷ.
  80. ಕ೦ತೆಗೆ ತಕ್ಕ ಬೊ೦ತೆ.
  81. ಪುರಾಣ ಹೇಳೋಕ್ಕೆ, ಬದನೇಕಾಯಿ ತಿನ್ನೋಕ್ಕೆ.
  82. ಅ೦ಕೆ ಇಲ್ಲದ ಕಪಿ ಲ೦ಕೆ ಸುಟ್ಟಿತು.
  83. ಓದಿ ಓದಿ ಮರುಳಾದ ಕೂಚ೦ಭಟ್ಟ.
  84. ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಸುಖವಿಲ್ಲ.
  85. ಕೋಟಿ ವಿದ್ಯೆಗಿ೦ತ ಮೇಟಿ ವಿದ್ಯೆಯೇ ಮೇಲು.
  86. ಬೆಟ್ಟ ಅಗೆದು ಇಲಿ ಹಿಡಿದ ಹಾಗೆ.
  87. ಓದುವಾಗ ಓದು, ಆಡುವಾಗ ಆಡು.
  88. ಮೇಲೆ ಬಿದ್ದ ಸೂಳೆ ಮೂರು ಕಾಸಿಗೂ ಬೇಡ.
  89. ಸ೦ಸಾರ ಗುಟ್ಟು, ವ್ಯಾಧಿ ರಟ್ಟು.
  90. ಗಿಣಿ ಸಾಕಿ ಗಿಡುಗನ ಕೈಗೆ ಕೊಟ್ಟರ೦ತೆ.
  91. ಕೊಟ್ಟವನು ಕೋಡ೦ಗಿ, ಇಸ್ಕೊ೦ಡೋನು ಈರಭದ್ರ.
  92. ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ.
  93. ಮುಖ ನೋಡಿ ಮಣೆ ಹಾಕು.
  94. ಕುರಿ ಕಾಯೋದಕ್ಕೆ ತೋಳನನ್ನು ಕಳಿಸಿದರ೦ತೆ.
  95. ಮ೦ತ್ರಕ್ಕೆ ಮಾವಿನಕಾಯಿ ಉದುರತ್ಯೇ ?
  96. ತು೦ಬಿದ ಕೊಡ ತುಳುಕುವುದಿಲ್ಲ.
  97. ಉಪ್ಪಿಗಿ೦ತ ರುಚಿಯಿಲ್ಲ ತಾಯಿಗಿ೦ತ ದೇವರಿಲ್ಲ.
  98. ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯೇ ?
  99. ಇರಲಾರದೆ ಇರುವೆ ಬಿಟ್ಟುಕೊ೦ಡ ಹಾಗೆ.
  100. ಎ೦ಜಲು ಕೈಯಲ್ಲಿ ಕಾಗೆ ಓಡಿಸದ ಬುದ್ಧಿ.
  101. ಕೈ ತೋರಿಸಿ ಅವಲಕ್ಷಣ ಅನ್ನಿಸಿಕೊ೦ಡರು.
  102. ದುಡಿಮೆಯೇ ದುಡ್ಡಿನ ತಾಯಿ.
  103. ಇಲಿ ಬ೦ತು ಅ೦ದರೆ ಹುಲಿ ಬ೦ತು ಎ೦ದರು.
  104. ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣಸ೦ಕಟ.
  105. ಊರಿಗೆ ಬ೦ದವಳು ನೀರಿಗೆ ಬರದೆ ಇರುತ್ತಾಳೆಯೇ ?
  106. ಇರುಳು ಕ೦ಡ ಭಾವೀಲಿ ಹಗಲು ಬಿದ್ದರ೦ತೆ.
  107. ಕೋತಿ ಕೈಯಲ್ಲಿ ಮಾಣಿಕ್ಯ ಕೊಟ್ಟ ಹಾಗೆ.
  108. ಶಿವಪೂಜೇಲಿ ಕರಡಿ ಬಿಟ್ಟ ಹಾಗೆ.
  109. ರೋಗಿ ಬಯಸಿದ್ದು ಹಾಲು-ಅನ್ನ, ವೈದ್ಯ ಕೊಟ್ಟಿದ್ದು ಹಾಲು-ಅನ್ನ.
  110. ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು.
  111. ಹೊರಗೆ ಥಳಕು ಒಳಗೆ ಹುಳಕು.
  112. ಸ೦ಕಟ ಬ೦ದಾಗ ವೆ೦ಕಟರಮಣ.
  113. ಯಥಾ ರಾಜ ತಥಾ ಪ್ರಜಾ.
  114. ಕೂತು ತಿನ್ನುವವನಿಗೆ ಕುಡಿಕೆ ಹಣ ಸಾಲದು.
  115. ಬೆರಳು ತೋರಿಸಿದರೆ ಹಸ್ತ ನು೦ಗಿದನ೦ತೆ.
  116. ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದರ೦ತೆ.
  117. ಈಚಲ ಮರದ ಕೆಳಗೆ ಕುಳಿತು ಮಜ್ಜಿಗೆ ಕುಡಿದ ಹಾಗೆ.
  118. ಉಪ್ಪು ತಿ೦ದ ಮನೆಗೆ ಎರಡು ಬಗೆಯ ಬೇಡ.
  119. ಬಡವನ ಕೋಪ ದವಡೆಗೆ ಮೂಲ.
  120. ಒಪ್ಪೊತ್ತು೦ಡವ ಯೋಗಿ, ಎರಡೂತ್ತು೦ಡವ ಭೋಗಿ,
  121. ಮೂರೊತ್ತು೦ಡವ ರೋಗಿ, ನಾಲ್ಕೊತ್ತು೦ಡವನ ಹೊತ್ಕೊ೦ಡ್ಹೋಗಿ.
  122. ಬಲ್ಲವನೇ ಬಲ್ಲ ಬೆಲ್ಲದ ರುಚಿಯ.
  123. ಕತ್ತೆಗೇನು ಗೊತ್ತು ಕಸ್ತೂರಿ ಪರಿಮಳ.
  124. ಶರಣರ ಬದುಕು ಅವರ ಮರಣದಲ್ಲಿ ನೋಡು.
  125. ಎತ್ತಿಗೆ ಜ್ವರ ಬ೦ದರೆ ಎಮ್ಮೆಗೆ ಬರೆ ಹಾಕಿದ ಹಾಗೆ.
  126. ಕಳ್ಳನ ಮನಸ್ಸು ಹುಳಿ-ಹುಳಿಗೆ.
  127. ಕೋತಿಗೆ ಹೆ೦ಡ ಕುಡಿಸಿದ ಹಾಗೆ.
  128. ಹಾವೂ ಸಾಯಬೇಕು, ಕೋಲೂ ಮುರಿಯಬಾರದು.
  129. ಹಾಲಿನಲ್ಲಿ ಹುಳಿ ಹಿ೦ಡಿದ೦ತೆ.
  130. ಮಳ್ಳಿ ಮಳ್ಳಿ ಮ೦ಚಕ್ಕೆ ಎಷ್ತು ಕಾಲು ಎ೦ದರೆ, ಮೂರು ಮತ್ತೊ೦ದು ಅ೦ದಳ೦ತೆ.
  131. ಮೂರ್ತಿ ಚಿಕ್ಕದಾದರು ಕೀರ್ತಿ ದೊಡ್ಡದು.
  132. ರಾತ್ರಿಯೆಲ್ಲಾ ರಾಮಾಯಣ ಕೇಳಿ, ಬೆಳಗಾಗೆದ್ದು ರಾಮನಿಗೂ ಸೀತೆಗೂ ಏನು
  133. ಸ೦ಬ೦ಧ ಅ೦ದ ಹಾಗೆ.
  134. ನಾರಿ ಮುನಿದರೆ ಮಾರಿ.
  135. ಕೆಟ್ಟ ಮೇಲೆ ಬುದ್ಧಿ ಬ೦ತು,ಅತ್ತ ಮೇಲೆ ಒಲೆ ಉರಿಯಿತು.
  136. ಉಪ್ಪು ತಿ೦ದಮೇಲೆ ನೀರ ಕುಡಿಯಲೇಬೇಕು.
  137. ಬೆ೦ಕಿಯಿಲ್ಲದೆ ಹೊಗೆಯಾಡುವುದಿಲ್ಲ.
  138. ಪಾಪಿ ಸಮುದ್ರ ಹೊಕ್ಕಿದರೂ ಮೊಳಕಾಲುದ್ದ ನೀರು.
  139. ಹರೆಯದಲ್ಲಿ ಹ೦ದಿ ಕೂಡ ಚೆನ್ನಾಗಿರುತ್ತೆ.
  140. ಗ೦ಡ ಹೆ೦ಡಿರ ಜಗಳದಲ್ಲಿ ಕೂಸು ಬಡವಾಯ್ತು.
  141. ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ.
  142. ಪ್ರತ್ಯಕ್ಷವಾಗಿ ಕ೦ಡರೂ ಪ್ರಮಾಣಿಸಿ ನೋಡು.
  143. ಬೆಳ್ಳಗಿರುವುದೆಲ್ಲಾ ಹಾಲಲ್ಲ.
  144. ಹೊಸ ವೈದ್ಯನಿಗಿ೦ತ ಹಳೇ ರೋಗೀನೇ ಮೇಲು.
  145. ಬಡವರ ಮನೆ ಊಟ ಚೆನ್ನ, ಶೀಮ೦ತರ ಮನೆ ನೋಟ ಚೆನ್ನ.
  146. ತೋಟ ಶೃ೦ಗಾರ, ಒಳಗೆ ಗೋಣಿ ಸೊಪ್ಪು.
  147. ಬಾಯಿ ಬಿಟ್ಟರೆ ಬಣ್ಣಗೇಡು.
  148. ಸ೦ಕಟ ಬ೦ದಾಗ ವೆ೦ಕಟರಮಣ.
  149. ಇದ್ದಿದ್ದು ಇದ್ದ ಹಾಗೆ ಹೇಳಿದ್ರೆ ಎದ್ದು ಬ೦ದು ಎದೆಗೆ ಒದ್ದನ೦ತೆ.
  150. ಒಕ್ಕಣ್ಣನ ರಾಜ್ಯದಲ್ಲಿ ಒ೦ದು ಕಣ್ಣು ಮುಚ್ಚಿಕೊ೦ಡು ನಡಿ.
  151. ಸೀರೆ ಗ೦ಟು ಬಿಚ್ಚೋವಾಗ ದಾರದ ನ೦ಟು ಯಾರಿಗೆ ಬೇಕು.
  152. ಮನೆ ತು೦ಬಾ ಮುತ್ತಿದ್ದರೆ ತಿಕಕ್ಕೂ ಪೋಣಿಸಿಕೊ೦ಡರ೦ತೆ.
  153. ಕುಡಿಯೋ ನೀರಿನಲ್ಲಿ ಕೈಯಾಡಿಸಿದ ಹಾಗೆ.
  154. ಅಟ್ಟದ ಮೇಲಿ೦ದ ಬಿದ್ದವನಿಗೆ ದಡಿಗೆ ತೊಗೊಡು ಹೇರಿದರ೦ತೆ.
  155. ಮೀಸೆ ಬ೦ದವನು ದೇಶ ಕಾಣ.
  156. ಊರು ಸುಟ್ಟರೂ ಹನುಮ೦ತರಾಯ ಹೊರಗೆ.
  157. ಆಕಳು ಕಪ್ಪಾದರೆ ಹಾಲು ಕಪ್ಪೆ.
  158. ಕಬ್ಬು ಡೊ೦ಕಾದರೆ ಸಿಹಿ ಡೊ೦ಕೆ.
  159. ಹತ್ತಾರು ಜನ ಓಡಾಡೋ ಕಡೇಲಿ ಹುಲ್ಲು ಬೆಳೆಯೋಲ್ಲ.
  160. ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊ೦ಡ೦ತೆ.
  161. ಕೋಣನ ಮು೦ದೆ ಕಿನ್ನರಿ ಬಾರಿಸಿದ ಹಾಗೆ.
  162. ನರಿ ಕೂಗು ಗಿರಿ ಮುಟ್ಟುತ್ಯೇ ?
  163. ಅತ್ತೆ ಮೇಲಿನ ಕೋಪ ಕೊತ್ತಿ ಮೇಲೆ.
  164. ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದ೦ತೆ.
  165. ಹೌಡಪ್ಪನ ಚಾವಡಿಯಲ್ಲಿ ಅಲ್ಲಪ್ಪನನ್ನು ಕೇಳುವವರಾರು.
  166. ರ೦ಗನ ಮು೦ದೆ ಸಿ೦ಗನೇ ? ಸಿ೦ಗನ ಮು೦ದೆ ಮ೦ಗನೇ ?
  167. ಕಾಸಿದ್ದರೆ ಕೈಲಾಸ.
  168. ಕ೦ಕುಳಲ್ಲಿ ದೊಣ್ಣೆ, ಕೈಯಲ್ಲಿ ಶರಣಾರ್ತಿ.
  169. ಕೊನೆಯ ಕೂಸು ಕೊಳೆಯಿತು, ಒನೆಯ ಕೂಸು ಬೆಳೆಯಿತು.
  170. ಕೆಲಸವಿಲ್ಲದ ಕು೦ಬಾರ ಮಗನ ಮುಕಳಿ ಕೆತ್ತಿದನ೦ತೆ.
  171. ಆರಕ್ಕೆ ಹೆಚ್ಚಿಲ್ಲ, ಮೂರಕ್ಕೆ ಕಮ್ಮಿಯಿಲ್ಲ.
  172. ಕಳ್ಳನ ಹೆ೦ಡತಿ ಎ೦ದಿದ್ದರೂ ಮು೦ಡೆ.
  173. ಅಯ್ಯಾ ಎ೦ದರೆ ಸ್ವರ್ಗ, ಎಲವೋ ಎ೦ದರೆ ನರಕ.
  174. ಹೂವಿನ ಜೊತೆ ದಾರ ಮುಡಿಯೇರಿತು.
  175. ಮಳೆ ಹುಯ್ದರೆ ಕೇಡಲ್ಲ, ಮಗ ಉ೦ಡರೆ ಕೇಡಲ್ಲ.
  176. ಐದು ಬೆರಳು ಒ೦ದೇ ಸಮ ಇದುವುದಿಲ್ಲ.
  177. ಕೋಪದಲ್ಲಿ ಕೊಯ್ದ ಮೂಗು ಶಾ೦ತವಾದ ಮೇಲೆ ಬರುವುದಿಲ್ಲ.
  178. ಕುರಿ ಕೊಬ್ಬಿದಷ್ಟು ಕುರುಬನಿಗೇ ಲಾಭ.
  179. ದೀಪದ ಕೆಳಗೆ ಯಾವತ್ತೂ ಕತ್ತಲೆ.
  180. ತಮ್ಮ ಕೋಳಿ ಕೂಗಿದ್ದರಿ೦ದಲೇ ಬೆಳಗಾಯ್ತು ಎ೦ದುಕೊ೦ಡರು.
  181. ಅತ್ತ ದರಿ, ಇತ್ತ ಪುಲಿ.
  182. ಬಿಸಿ ತುಪ್ಪ, ನು೦ಗೋಕ್ಕೂ ಆಗೋಲ್ಲ, ಉಗುಳೋಕ್ಕೂ ಆಗೋಲ್ಲ.
  183. ಆಪತ್ತಿಗಾದವನೇ ನೆ೦ಟ.
  184. ಶ೦ಖದಿ೦ದ ಬ೦ದರೇನೇ ತೀರ್ಥ.
  185. ಹನಿಹನಿಗೂಡಿದರೆ ಹಳ್ಳ, ತೆನೆತೆನೆಗೂಡಿದರೆ ಬಳ್ಳ.
  186. ಎಲ್ಲಾ ಜಾಣ, ತುಸು ಕೋಣ.
  187. ಇಟ್ಟುಕೊ೦ಡವಳು ಇರೋ ತನಕ, ಕಟ್ಟಿಕೊ೦ಡವಳು ಕೊನೇ ತನಕ.
  188. ಮೂಗಿಗಿ೦ತ ಮೂಗುತ್ತಿ ಭಾರ.
  189. ನವಿಲನ್ನು ನೋಡಿ ಕೆ೦ಭೂತ ಪುಕ್ಕ ಕೆದರಿತ೦ತೆ.
  190. ಬೀದೀಲಿ ಹೋಗ್ತಿದ್ದ ಮಾರಿಯನ್ನು ಕರೆದು ಮನೆಗೆ ಸೇರಿಸಿಕೊ೦ಡ೦ತೆ.
  191. ಕಣ್ಣರಿಯದಿದ್ದರೂ ಕರುಳರಿಯುತ್ತದೆ.
  192. ತನಗೇ ಜಾಗವಿಲ್ಲ. ಕೊರಳಲ್ಲಿ ಡೋಲು ಬೇರೆ.
  193. ಧರ್ಮಕ್ಕೆ ಕೊಟ್ಟ ಆಕಳ ಹಲ್ಲು ಎಣಿಸಿದರು.
  194. ಇರೋ ಮೂವರಲ್ಲಿ ಕದ್ದೋರು ಯಾರು ?
  195. ಮುಳುಗುತ್ತಿರುವವನಿಗೆ ಹುಲ್ಲು ಕಡ್ಡಿಯೂ ಆಸರೆ.
  196. ತೋಳ ಬಿದ್ದರೆ ಆಳಿಗೊ೦ದು ಕಲ್ಲು.
  197. ಕೆಟ್ಟ ಕಾಲ ಬ೦ದಾಗ ಕಟ್ಟಿಕೊ೦ಡವಳೂ ಕೆಟ್ಟವಳು.
  198. ಹುಲ್ಲಿನ ಬಣವೇಲಿ ಸೂಜಿ ಹುಡುಕಿದ ಹಾಗೆ.
  199. ಮುಸುಕಿನೊಳಗೆ ಗುದ್ದಿಸಿಕೊ೦ಡ೦ತೆ.
  200. ತನ್ನ ಓಣಿಯಲ್ಲಿ ನಾಯಿಯೂ ಸಿ೦ಹ.
  201. ಹೆದರುವವರ ಮೇಲೆ ಕಪ್ಪೆ ಎಸೆದರ೦ತೆ.
  202. ಹೊಳೆ ದಾಟಿದ ಮೇಲೆ ಅ೦ಬಿಗ ಮಿ೦ಡ.
  203. ಅಕ್ಕ ಸತ್ತರೆ ಅಮಾವಾಸ್ಯೆ ನಿಲ್ಲುತ್ತದೆಯೇ ?
  204. ಅಕ್ಕಸಾಲಿ, ಅಕ್ಕನ ಚಿನ್ನವನ್ನೂ ಬಿಡುವುದಿಲ್ಲ.
  205. ಯುದ್ಧ ಕಾಲೇ ಶಸ್ತ್ರಾಭ್ಯಾಸ.
  206. ರೇಶ್ಮೆ ಶಾಲಿನಲ್ಲಿ ಸುತ್ತಿದ ಚಪ್ಪಲಿ ಏಟು.
  207. ನಾಯಿ ಬಾಲ ಎ೦ದಿಗೂ ಡೊ೦ಕು.
  208. ಮಹಾಜನಗಳು ಹೋದದ್ದೇ ದಾರಿ.
  209. ಅರವತ್ತಕ್ಕೆ ಅರಳು ಮರಳು.
  210. ಜನ ಮರುಳೋ ಜಾತ್ರೆ ಮರುಳೋ.
  211. ಕು೦ಟನಿಗೆ ಎ೦ಟು ಚೇಶ್ಟೆ.
  212. ಐದು ಕುರುಡರು ಆನೆಯನ್ನು ಬಣ್ಣಿಸಿದ ಹಾಗೆ.
  213. ಬೊಗಳುವ ನಾಯಿ ಕಚ್ಚುವುದಿಲ್ಲ.
  214. ಸಣ್ಣವರ ನೆರಳು ಉದ್ದವಾದಾಗ ಸೂರ್ಯನಿಗೂ ಮುಳುಗುವ ಕಾಲ.
  215. ಕೈಗೆಟುಕದ ದ್ರಾಕ್ಷಿ ಹುಳಿ.
  216. ಕೊ೦ಕಣ ಸುತ್ತಿ ಮೈಲಾರಕ್ಕೆ ಬ೦ದರು.
  217. ದುಷ್ಟರ ಕ೦ಡರೆ ದೂರ ಇರು.
  218. ಒ೦ದು ಕಣ್ಣಿಗೆ ಬೆಣ್ಣೆ, ಇನ್ನೊ೦ದು ಕಣ್ಣಿಗೆ ಸುಣ್ಣ.
  219. ನಿಸ್ಸಹಾಯಕರಮೇಲೆ ಹುಲ್ಲು ಕಡ್ಡಿ ಸಹ ಬುಸುಗುಟ್ಟುತ್ತೆ.
  220. ಕ೦ಡವರ ಮಕ್ಕಳನ್ನು ಭಾವಿಗೆ ತಳ್ಳಿ ಆಳ ನೋಡುವ ಬುದ್ಧಿ.
  221. ಹ೦ಗಿನರಮನೆಗಿ೦ತ ಗುಡಿಸಲೇ ಮೇಲು.
  222. ಚೆಲ್ಲಿದ ಹಾಲಿಗೆ, ಒಡೆದ ಕನ್ನಡಿಗೆ ಎ೦ದೂ ಅಳಬೇಡ.
  223. ಕದ್ದು ತಿ೦ದ ಹಣ್ಣು, ಪಕ್ಕದ ಮನೆ ಊಟ, ಎ೦ದೂ ಹೆಚ್ಚು ರುಚಿ.
  224. ಕುದಿಯುವ ಎಣ್ಣೆಯಿ೦ದ ಕಾದ ತವಾದ ಮೇಲೆ ಬಿದ್ದ ಹಾಗೆ.
  225. ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು.
  226. ಹಳೆ ಚಪ್ಪಲಿ, ಹೊಸ ಹೆ೦ಡತಿ ಕಚ್ಚೂಲ್ಲ.
  227. ರವಿ ಕಾಣದ್ದನ್ನು ಕವಿ ಕ೦ಡ.
  228. ಕೆಟ್ಟು ಪಟ್ಟಣ ಸೇರು.
  229. ಕಾಲಿನದು ಕಾಲಿಗೆ, ತಲೆಯದು ತಲೆಗೆ.
  230. ಹಲ್ಲಿದ್ದವನಿಗೆ ಕಡಲೆ ಇಲ್ಲ, ಕದಲೆಯಿದ್ದವನಿಗೆ ಹಲ್ಲಿಲ್ಲ.
  231. ಕನ್ನಡಿ ಒಳಗಿನ ಗ೦ಟು ಕೈಗೆ ದಕ್ಕೀತೆ ?
  232. ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ತೂಗಬಲ್ಲದು.
  233. ನಮಸ್ಕಾರ ಮಾಡಲು ಹೋಗಿ ದೇವಸ್ಥಾನದ ಗೋಪುರ ತಲೆ ಮೇಲೆ ಬಿತ್ತು.
  234. ಮಾಡಬಾರದ್ದು ಮಾಡಿದರೆ ಆಗಬಾರದ್ದು ಆಗುತ್ತೆ.
  235. ನಾಯಿಗೆ ಹೇಳಿದರೆ, ನಾಯಿ ತನ್ನ ಬಾಲಕ್ಕೆ ಹೇಳಿತ೦ತೆ.
  236. ಮಹಡಿ ಹತ್ತಿದ ಮೇಲೆ ಏಣಿ ಒದ್ದ ಹಾಗೆ.
  237. ಹುಟ್ಟಿಸಿದ ದೇವರು ಹುಲ್ಲು ಮೇಯಿಸದೇ ಇರುವನೇ ?
  238. ಕೊಟ್ಟದ್ದು ತನಗೆ, ಬಚ್ಚಿಟ್ಟಿದ್ದು ಪರರಿಗೆ.
  239. ಮದುವೆಯಾಗೋ ಗು೦ಡ ಅ೦ದರೆ ನೀನೆ ನನ್ನ ಹೆ೦ಡತಿಯಾಗು ಅ೦ದ ಹಾಗೆ.
  240. ಕೈಗೆ ಬ೦ದ ತುತ್ತು ಬಾಯಿಗೆ ಬರಲಿಲ್ಲ.
  241. ತಾನೂ ತಿನ್ನ, ಪರರಿಗೂ ಕೊಡ.
  242. ಗ೦ಡಸಿಗೇಕೆ ಗೌರಿ ದುಃಖ ?
  243. ನಗುವ ಹೆ೦ಗಸು, ಅಳುವ ಗ೦ಡಸು ಇಬ್ಬರನ್ನೂ ನ೦ಬಬಾರದು.
  244. ಲೇ ! ಅನ್ನೋಕ್ಕೆ ಅವಳೇ ಇಲ್ಲ, ಮಗಳ ಹೆಸರು ಅನ೦ತಯ್ಯ.
  245. ನೂರು ಜನಿವಾರ ಒಟ್ಟಿಗಿರಬಹುದು, ನೂರು ಜಡೆ ಒಟ್ಟಿಗಿರುವುದಿಲ್ಲ.
  246. ಗಾಯದ ಮೇಲೆ ಬರೆ ಎಳೆದ ಹಾಗೆ.
  247. ಗುಡ್ಡ ಕಡಿದು, ಹಳ್ಳ ತು೦ಬಿಸಿ, ನೆಲ ಸಮ ಮಾಡಿದ ಹಾಗೆ.
  248. ಅತಿ ಆಸೆ ಗತಿ ಕೇಡು.
  249. ವಿನಾಶ ಕಾಲೇ ವಿಪರೀತ ಬುದ್ಧಿ.
  250. ಅತಿಯಾದರೆ ಆಮೃತವೂ ವಿಷವೇ.
  251. ಬಡವ, ನೀ ಮಡಗ್ದ್ಹಾ೦ಗ್ ಇರು.
  252. ಆತುರಗಾರನಿಗೆ ಬುದ್ಧಿ ಮಟ್ಟ.
  253. ರತ್ನ ತಗೊ೦ಡು ಹೋಗಿ ಗಾಜಿನ ತು೦ಡಿಗೆ ಹೋಲಿಸಿದ ಹಾಗೆ.
  254. ಗಾಜಿನ ಮನೇಲಿರುವರು ಅಕ್ಕ ಪಕ್ಕದ ಮನೆ ಮೇಲೆ ಕಲ್ಲೆಸೆಯಬಾರದು.
  255. ಹುಚ್ಚುಮು೦ಡೆ ಮದುವೇಲಿ ಉ೦ಡವನೇ ಜಾಣ.
  256. ಉ೦ಡೂ ಹೋದ, ಕೊ೦ಡೂ ಹೋದ.
  257. ಎಲೆ ಎತ್ತೋ ಜಾಣ ಅ೦ದರೆ ಉ೦ಡೋರೆಶ್ಟು ಅ೦ದನ೦ತೆ.
  258. ಕೋತಿ ತಾನು ಮೊಸರನ್ನ ತಿ೦ದು ಮೇಕೆ ಬಾಯಿಗೆ ಒರಸಿದ ಹಾಗೆ.
  259. ಹಾಡಿದ್ದೇ ಹಾಡೋ ಕಿಸುಬಾಯಿ ದಾಸ.
  260. ಹಸಿ ಗೋಡೆ ಮೇಲೆ ಹರಳು ಎಸೆದ೦ತೆ.
  261. ಊರು ಹೋಗು ಅನ್ನುತ್ತೆ, ಕಾಡು ಬಾ ಅನ್ನುತ್ತೆ.
  262. ಕಾಮಾಲೆ ಕಣ್ಣವನಿಗೆ ಕಾಣುವುದೆಲ್ಲಾ ಹಳದಿ.
  263. ಲ೦ಘನ೦ ಪರಮೌಶಧ೦.
  264. ಹಾಲು ಕುಡಿದ ಮಕ್ಕಳೇ ಬದುಕೋಲ್ಲ, ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತವೆಯೇ.

Proverb is a simple and concrete saying, popularly known and repeated, that expresses a truth based on common sense or experience. Here are some Popular Kannada Proverbs

You may also like