ತೋಟಗಾರಿಕೆ ಇಲಾಖೆಯಿಂದ 2020-21 ನೇ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ನೀರಿನ ಮಿತಬಳಕೆಗಾಗಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಕಲಬುರಗಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಸಹಾಯಧನ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
ಆಸಕ್ತ ರೈತರು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಹಾಗೂ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ.
pmksy gov in login : https://pmksy.gov.in/
ರಕ್ಷಾ ಬಂಧನ: ಆಚರಣೆಯ ಹಿಂದಿನ ಮಹತ್ವ, ರಕ್ಷಾಬಂಧನಕ್ಕೆ ಶುಭಾಶಯಗಳು ಇಲ್ಲಿ ತಿಳಿಯಿರಿ