Home » ಹಾಸನ ಜಿಲ್ಲಾಧಿಕಾರಿಯಾಗಿ ಮತ್ತೆ ರೋಹಿಣಿ ಸಿಂಧೂರಿ ವರ್ಗಾವಣೆ

ಹಾಸನ ಜಿಲ್ಲಾಧಿಕಾರಿಯಾಗಿ ಮತ್ತೆ ರೋಹಿಣಿ ಸಿಂಧೂರಿ ವರ್ಗಾವಣೆ

by manager manager

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಏಪ್ರಿಲ್ 17ರಂದು ಹಾಸನ ಜಿಲ್ಲಾಧಿಕಾರಿ ಆಗಿದ್ದ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿದ್ದ ಅಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಆದೇಶವನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರೀಯ ಆಡಳಿತ ನ್ಯಾಯಮಂಡಳಿ(ಸಿಎಟಿ) ಎತ್ತಿ ಹಿಡಿದಿತ್ತು. ಈ ಕ್ರಮವನ್ನು ಪ್ರಶ್ನಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪುನಃ ಹೈಕೋರ್ಟ್ ಮೆಟ್ಟಿಲೇರಿದ್ದರು.

ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ಸೋಮವಾರ ನ್ಯಾ.ಎಚ್.ಜಿ.ರಮೇಶ್ ಹಾಗೂ ನ್ಯಾ.ಪಿ.ಎಂ.ನವಾಜ್ ನೇತೃತ್ವದ ವಿಭಾಗೀಯಪೀಠದಲ್ಲಿ ನಡೆಯಿತು. ವಿಚಾರಣೆ ವೇಳೆ ಹಾಸನ ಡಿಸಿಯಾಗಿ ಮುಂದುವರಿಸಲು ಸರ್ಕಾರದ ಪರ ಎಎಜಿ ಪೊನ್ನಣ್ಣ ಒಲವು ವ್ಯಕ್ತಪಡಿಸಿದರು. ಈ ಬೆನ್ನಲ್ಲೆ ಹಾಸನ ಜಿಲ್ಲಾಧಿಕಾರಿಯಾಗಿಯೇ ಮುಂದುವರೆಯುವಂತೆ ಆದೇಶಿಸಿದೆ.

ಸರ್ಕಾರ ತನ್ನ ಅಭಿಪ್ರಾಯ ತಿಳಿಸಿದ ಕೂಡಲೇ ಹೈಕೋರ್ಟ್ ಹಾಲಿ ಜಿಲ್ಲಾಧಿಕಾರಿಯಾಗಿರುವ ರಣದೀಪ್ ಅವರನ್ನು ಬೇರೆ ಸ್ಥಳಕ್ಕೆ ವರ್ಗಾವಣೆ ಮಾಡಲು ಆದೇಶ ನೀಡಿತು. ಈ ಆದೇಶವನ್ನು ಪ್ರಕಟಿಸುವ ಮೂಲಕ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಪೀಠ ಇತ್ಯರ್ಥ ಪಡಿದೆ. ಹೈಕೋರ್ಟ್’ನಿಂದ ಆದೇಶ ಪ್ರಕಟವಾಗುತ್ತಿದ್ದಂತೆ ರಾಜ್ಯ ಸರ್ಕಾರ ರೋಹಿಣಿ ಸಿಂಧೂರಿ ಅವರನ್ನು ಮತ್ತೆ ಹಾಸನಕ್ಕೆ ವರ್ಗಾವಣೆಗೊಳಿಸಿದೆ.

Karnataka govt appointed IAS officer rohini sindhuri as district collector of Hassan district. Rohini Sindhuri to be Hassan DC again. State government told the Karnataka High Court on Monday.

You may also like