Home » RDWSD ಇಲಾಖೆಯಿಂದ ನೇಮಕ: ಸಮಾಲೋಚಕ ಹುದ್ದೆಗೆ ಅರ್ಜಿ ಆಹ್ವಾನ

RDWSD ಇಲಾಖೆಯಿಂದ ನೇಮಕ: ಸಮಾಲೋಚಕ ಹುದ್ದೆಗೆ ಅರ್ಜಿ ಆಹ್ವಾನ

by manager manager

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ / ಹೊರಗುತ್ತಿಗೆ ಆಧಾರದಲ್ಲಿ ಸಮಾಲೋಚಕರನ್ನು ನೇಮಕಾತಿ ಮಾಡಲು ಅರ್ಜಿ ಕರೆಯಲಾಗಿದೆ.

ಹುದ್ದೆಗಳ ವಿವರ
ಜಿಲ್ಲಾ ಎಂಐಎಸ್‌ ಸಮಾಲೋಚಕರು – 05
ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು – 01
ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು – 01

ವೇತನ : ರೂ.22,000 – 25,000

ಕನಿಷ್ಠ 3 ವರ್ಷ ಕಾರ್ಯಾನುಭವ ಹೊಂದಿರಬೇಕು. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಅಥವಾ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತದೆ. ಈ ಹುದ್ದೆಗಳಿಗೆ ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳನ್ನು ಮೀರಿರಬಾರದು.

ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ, ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಪ್ರಮುಖ ಸಾಮರ್ಥ್ಯಗಳು, ರೆಸ್ಯೂಮ್‌ ಹಾಗೂ ಅರ್ಜಿ ಜತೆಗೆ ‘ ನಾನು ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ’ ಎಂಬುದರ ಬಗ್ಗೆ ಒಂದು ಪುಟದಲ್ಲಿ ಟಿಪ್ಪಣಿ ಬರೆದು ಅರ್ಜಿಯನ್ನು ವಿಳಾಸ – ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2ನೇ ಮಹಡಿ, ಕೆ.ಹೆಚ್‌.ಬಿ ಕಟ್ಟಡ, ಕಾವೇರಿ ಭವನ, ಕೆ.ಜಿ.ರಸ್ತೆ, ಬೆಂಗಳೂರು 560009′ ಗೆ ಅರ್ಜಿಯ ಹಾರ್ಡ್‌ ಪ್ರತಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 05-07-2021

ಅರ್ಜಿಗೆ ವೆಬ್‌ಸೈಟ್‌ http://rdpr.karnataka.gov.in, https://swachhamevajayate.org ನಲ್ಲಿ ಲಭ್ಯ.

ಹರಪನಹಳ್ಳಿ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು ಜಿಲ್ಲೆಗಳಲ್ಲಿ ಈ ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ.

Notification

ಭಾರತ ಸಂವಿಧಾನದ ಭಾಗಗಳು, ವಿಧಿಗಳು ಮತ್ತು ಅವುಗಳಿಗೆ ಸಂಬಂಧಿಸಿದ ವಿಷಯಗಳು..

You may also like