Home » SSLC ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದವರಿಗೆ 7 ರಿಂದ 15 ಸಾವಿರ ರೂವರೆಗೆ ಪ್ರೋತ್ಸಾಹ ಧನ

SSLC ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದವರಿಗೆ 7 ರಿಂದ 15 ಸಾವಿರ ರೂವರೆಗೆ ಪ್ರೋತ್ಸಾಹ ಧನ

by manager manager

Scheduled tribes welfare department incentives for SSLC toppers

ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯ ಪರಿಶಿಷ್ಟ ಪಂಗಡದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

2018 ನೇ ಸಾಲಿನಲ್ಲಿ SSLC ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ಪ್ರೋತ್ಸಾಹ ಧನ ಮಂಜೂರು ಮಾಡಲಾಗುತ್ತಿದೆ.

ಅರ್ಹತಾ ಷರತ್ತುಗಳು

– ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ ಶೇ.74.99 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ರೂ.7000 ಪ್ರೋತ್ಸಾಹ ಧನ

– ಪ್ರಥಮ ಪ್ರಯತ್ನದಲ್ಲೇ ಶೇ.75 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ರೂ.15000 ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತದೆ.

ಈ ಪ್ರೋತ್ಸಾಹಧನವನ್ನು ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆ ಹಾಗೂ ಇತರ ವಿವರಗಳನ್ನು ಇಲಾಖೆಯ ವೆಬ್‌ಸೈಟ್ www.tw.kar.nic.in ನಲ್ಲಿ ಆನ್‌ಲೈನ್ ಮೂಲಕ ತಪ್ಪದೇ ನೋಂದಾಯಿಸಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆನ್‌ಲೈನ್ ಮೂಲಕ ಈ ಪ್ರೋತ್ಸಾಹಧನಕ್ಕೆ ನೋಂದಾಯಿಸಿಕೊಳ್ಳಲು ಕೊನೆಯ ದಿನಾಂಕ : 31-12-2018

ಆನ್‌ಲೈನ್‌ನಲ್ಲಿ ನೋಂದಣಿ ಮಾಡಲು ಬೇಕಾದ ಅಗತ್ಯ ದಾಖಲೆಗಳು ಈ ಕೆಳಗಿನಂತಿವೆ.

-SSLC ನೋಂದಣಿ ಸಂಖ್ಯೆ

– ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ಹೆಸರು ಮತ್ತು ಆಧಾರ್ ಸಂಖ್ಯೆ

– ಜಾತಿ ಪ್ರಮಾಣ ಪತ್ರದ RD ಸಂಖ್ಯೆ

– ಅರ್ಜಿದಾರರ ಪಾಸ್‌ಪೋರ್ಟ್ ಅಳತೆಯ ಫೋಟೋ

-ಸ್ಕ್ಯಾನ್ ಮಾಡಲಾದ SSLC ಪ್ರಮಾಣ ಪತ್ರ

-ಆಧಾರ್ ಲಿಂಕ್ ಮಾಡಲಾದ ಬ್ಯಾಂಕ್ ಖಾತೆ ವಿವರ

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 080-22261787, 080-22261789

ಇ-ಮೇಲ್ ವಿಳಾಸ : stwelfare@gmail.com

Scheduled tribes welfare department has invited application from the SSLC topper of Scheduled tribe students to get incentives.

You may also like