Home » ಭಾರತ ಸರ್ಕಾರದ ವಿವಿಧ ವಿಭಾಗಗಳಿಗೆ ಅರ್ಜಿ ಅಹ್ವಾನ

ಭಾರತ ಸರ್ಕಾರದ ವಿವಿಧ ವಿಭಾಗಗಳಿಗೆ ಅರ್ಜಿ ಅಹ್ವಾನ

by manager manager

ಸಿಬ್ಬಂದಿ ಆಯ್ಕೆ ಸಮಿತಿ(staff selection commision) ರವರು ಪದವಿ ವಿದ್ಯಾರ್ಥಿಗಳಿಂದ ಭಾರತ ಸರ್ಕಾರದ ವಿವಿಧ ವಿಭಾಗಗಳಿಗೆ ಅರ್ಜಿಗಳನ್ನು ಅಹ್ವಾನಿಸಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ‘ಬಿ’ ಮತ್ತು ಗ್ರೂಪ್ ‘ಸಿ’ಯ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಮೇಲಿನ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಹಾಕಲು ಕಡೆಯ ದಿನಾಂಕ 04-06-2018 ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಂದಹಾಗೆ ಈ ಮೇಲಿನ ಹುದ್ದೆಗಳಿಗೆ ನಾಲ್ಕು ಹಂತಗಳಲ್ಲಿ ಪರೀಕ್ಷೆಗಳನ್ನು ನಡೆಸಲಿದ್ದು, ಮೊದಲ ಹಂತದ ಆನ್‌ಲೈನ್ ಪರೀಕ್ಷೆ ದಿನಾಂಕ 25-07-2018 ರಿಂದ 20-08-2018 ರೊಳಗೆ ನಡೆಯಲಿದೆ.

ಅರ್ಜಿ ಶುಲ್ಕ : ಮಹಿಳೆಯರಿಗೆ, ಎಸ್‌ಸಿ/ಎಸ್‌ಟಿ/ಮಾಜಿ ಸೈನಿಕ ಅಭ್ಯರ್ಥಿಳಿಗೆ ಈ ಹುದ್ದೆಗೆ ಅರ್ಜಿ ಶುಲ್ಕ ವಿನಾಯಿತಿ ಇದ್ದು, ಶುಲ್ಕವಿರುವುದಿಲ್ಲ. ಇತರೆ ಅಭ್ಯರ್ಥಿಗಳು ರೂ.100 ಅರ್ಜಿ ಶುಲ್ಕ ಪಾವತಿಸಬೇಕಾಗಿದೆ.

ಪರೀಕ್ಷಾ ಕೇಂದ್ರಗಳು: ಭಾರತ ಸರ್ಕಾರದ ವಿವಿಧ ವಿಭಾಗಗಳಿಗೆ ನಡೆಸಲಾಗುವ ಈ ಪರೀಕ್ಷೆಗಳನ್ನು ಬೆಂಗಳೂರು, ಧಾರವಾಡ, ಕಲಬುರ್ಗಿ, ಮಂಗಳೂರು, ಮೈಸೂರು ಗಳಲ್ಲಿ ನಡೆಸಲಾಗುತ್ತದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಪರೀಕ್ಷಾ ವಿಧಾನ ಹಾಗೂ ಇತರೆ ಯಾವುದೇ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಇಲಾಖಾ ವೆಬ್‌ಸೈಟ್ ssc.nic.in ಗೆ ಭೇಟಿ ನೀಡಬಹುದು. ಅಥವಾ 080-25502520 ಹಾಗೂ 9483862020 ಸಂಖ್ಯೆಗಳಿಗೆ ಕರೆ ಮಾಡಬಹುದು.

ಸೂಚನೆ: ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಪ್ರೋತ್ಸಾಹಿಸಲು ಕಾಲೇಜು ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಇವರು 16/05/2018 ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

Staff Selection Commission invited application for Group ‘b’ and ‘c’ posts in Indian govt’s various departments.

You may also like