Home » ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯಲ್ಲಿ 322 ಅಸಿಸ್ಟಂಟ್‌ ಕಮಾಂಡಂಟ್‌ಗಳ ನೇಮಕ: ಅರ್ಜಿ ಆಹ್ವಾನ

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯಲ್ಲಿ 322 ಅಸಿಸ್ಟಂಟ್‌ ಕಮಾಂಡಂಟ್‌ಗಳ ನೇಮಕ: ಅರ್ಜಿ ಆಹ್ವಾನ

by manager manager

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯಲ್ಲಿ ಅಸಿಸ್ಟಂಟ್ ಕಮಾಂಡಂಟ್ ಹುದ್ದೆಗಳ ಭರ್ತಿಗೆ ಕೇಂದ್ರ ಲೋಕಸೇವಾ ಆಯೋಗ ಅಧಿಸೂಚಿಸಿದ್ದು, 322 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಪದವಿ ಪಾಸಾದವರು ಮೇ 16 ರೊಳಗೆ ಆನ್‌ಲೈನ್‌ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ ಈ ಕೆಳಗಿನಂತೆ ನೀಡಲಾಗಿದೆ.

ಸಶಸ್ತ್ರ ಪಡೆಗಳ ಹೆಸರು ಮತ್ತು ಹುದ್ದೆಗಳ ಸಂಖ್ಯೆ

ಕೇಂದ್ರ ಕೈಗಾರಿಕಾ ಭದ್ರತಾ ಪಡೆ : 91
ಇಂಡೊ ಟಿಬೇಟಿಯನ್ ಬಾರ್ಡರ್ ಪೊಲೀಸ್: 60
ಗಡಿ ಭದ್ರತಾ ಪಡೆ : 86
ಕೇಂದ್ರ ಮೀಸಲು ಪೊಲೀಸ್ ಪಡೆ : 55
ಸರ್ವೀಸ್ ಸೆಲೆಕ್ಷನ್ ಬೋರ್ಡ್‌ : 30

ಸಿಎಪಿಎಫ್‌ ಪಡೆಗಳ ಅಸಿಸ್ಟಂಟ್ ಕಮಾಂಡಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪದವಿ ಪಾಸಾಗಿರಬೇಕು.

ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ಆಗಿರುವ, ಗರಿಷ್ಠ ವಯೋಮಿತಿ 25 ವರ್ಷ ಮೀರದ ಅಭ್ಯರ್ಥಿಗಳು ಅರ್ಹರು.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 27-04-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 16-05-2023 ರ ಸಂಜೆ 06 ಗಂಟೆವರೆಗೆ.
ಅರ್ಜಿ ಹಿಂಪಡೆಯಲು ಅವಕಾಶ : ಮೇ 17 ರಿಂದ 23, 2023 ರ ಸಂಜೆ 06 ಗಂಟೆವರೆಗೆ.
ಪರೀಕ್ಷೆ ದಿನಾಂಕ : 06-08-2023

ಅಪ್ಲಿಕೇಶನ್‌ ಶುಲ್ಕ ವಿವರ
ಜೆನೆರಲ್ ಕೆಟಗರಿ / ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.200.
ಎಸ್‌ಸಿ / ಎಸ್‌ಟಿ / ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಅಸಿಸ್ಟಂಟ್ ಕಮಾಂಡಂಟ್ ವೇತನ ಶ್ರೇಣಿ: Rs.56,100-1,77,500.

Apply Online

UPSC CAPF Job Notification 2023

You may also like